ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ಘನಘೋರ ದುರಂತದಲ್ಲಿ 17 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಬೆಂಗಳೂರಿನಿಂದ ಗೋಕರ್ಣಕ್ಕೆ ಹೊರಟಿದ್ದ ಸೀಬರ್ಡ್ ಸ್ಲೀಪರ್ ಕೋಚ್ ಬಸ್‌ಗೆ ಕಂಟೇನರ್ ಡಿಕ್ಕಿ ಹೊಡೆದ ಪರಿಣಾಮ ಬಸ್ ಸಂಪೂರ್ಣವಾಗಿ ಬೆಂಕಿಯಲ್ಲಿ ಭಸ್ಮಗೊಂಡಿದೆ. ಭೀಕರ ಅಪಘಾತದಲ್ಲಿ ಸಾವನ್ನಪ್ಪಿದವರಿಗೆ ಪ್ರಧಾನಿ ನರೇಂದ್ರ ಸಂತಾಪ ಸೂಚಿಸಿದ್ದು, ಪರಿಹಾರ ಘೋಷಣೆ ಮಾಡಿದ್ದಾರೆ.
ದುರಂತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ನರೇಂದ್ರ ಮೋದಿ ಪರಿಹಾರ ಘೋಷಣೆ ಮಾಡಿದ್ದಾರೆ. ಬಸ್ ದುರಂತದಲ್ಲಿ ಸಾವನ್ನಪ್ಪಿದವರಿಗೆ ಕೇಂದ್ರ ಸರ್ಕಾರದಿಂದ ತಲಾ 2 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ. ಖಾಸಗಿ ಬಸ್ ಅಪಘಾತದಲ್ಲಿ 21ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಗಾಯಾಳುಗಳಿಗೆ ತಲಾ 50 ಸಾವಿರ ನೀಡುವುದಾಗಿ ಪ್ರಧಾನಿ ಮೋದಿ ಪರಿಹಾರ ಘೋಷಿಸಿದ್ದಾರೆ.

