ಹೊಸದಿಂತ ಡಿಜಿಟಲ್ ಡೆಸ್ಕ್:
2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಗೆಲುವಿನೊಂದಿಗೆ ಶುಭಾರಂಭ ಮಾಡಿದ ಟೀಮ್ ಇಂಡಿಯಾಕ್ಕೆ ಮತ್ತೊಮ್ಮೆ ಬಿಗ್ ಶಾಕ್ ಎದುರಾಗಿದೆ.
ಭಾರತಕ್ಕೆ ಅಗ್ರಕ್ರಮಾಂಕದ ಬ್ಯಾಟಿಂಗ್ ವೈಫಲ್ಯ ತಂಡದ ತಲೆನೋವು ಹೆಚ್ಚುವಂತೆ ಮಾಡಿದೆ.ಹೀಗಿರುವಾಗ ತಂಡಕ್ಕೆ ಬಿಗ್ ಶಾಕ್ ಎದುರಾಗಿದ್ದು, ಅಕ್ಟೋಬರ್ 11ರಂದು ಆಫ್ಘಾನಿಸ್ತಾನ ಎದುರಿನ ಪಂದ್ಯದಿಂದಲೂ ಟೀಂ ಇಂಡಿಯಾ ಆರಂಭಿಕ ಬ್ಯಾಟರ್ ಶುಭ್‌ಮನ್ ಗಿಲ್ ಆಯ್ಕೆಗೆ ಅಲಭ್ಯರಾಗಿದ್ದಾರೆ.
ಕಳೆದ ಕೆಲ ದಿನಗಳಿಂದ ಡೆಂಗ್ಯೂ ಜ್ವರದಿಂದ ಬಳಲುತ್ತಿರುವ ಶುಭ್‌ಮನ್ ಗಿಲ್, ಆಸ್ಟ್ರೇಲಿಯಾ ಎದುರಿನ ಮಹತ್ವದ ಪಂದ್ಯಕ್ಕೆ ಅಲಭ್ಯರಾಗಿದ್ದರು. ಇದೀಗ ಆಫ್ಘಾನಿಸ್ತಾನ ಎದುರಿನ ಪಂದ್ಯದಿಂದಲೂ ಗಿಲ್ ಹೊರಬಿದ್ದಿದ್ದಾರೆ ಎಂದು ಬಿಸಿಸಿಐ ತಿಳಿಸಿದೆ.
ಶುಭ್‌ಮನ್ ಗಿಲ್ ಅನುಪಸ್ಥಿತಿಯಲ್ಲಿ ಆರಂಭಿಕನಾಗಿ ಕಣಕ್ಕಿಳಿದಿದ್ದ ಎಡಗೈ ಬ್ಯಾಟರ್ ಇಶಾನ್ ಕಿಶನ್, ತಾವೆದುರಿಸಿದ ಮೊದಲ ಎಸೆತದಲ್ಲೇ ವಿಕೆಟ್ ಒಪ್ಪಿಸುವ ಮೂಲಕ ಸಿಕ್ಕ ಅವಕಾಶ ಸದುಪಯೋಗಪಡಿಸಿಕೊಳ್ಳುವಲ್ಲಿ ವಿಫಲವಾಗಿದ್ದರು.ಹೀಗಿದ್ದು, ಇದೀಗ ಎರಡನೇ ಪಂದ್ಯದಿಂದ ಶುಭ್‌ಮನ್ ಗಿಲ್ ಹೊರಬಿದ್ದಿರುವುದರಿಂದ ಆಫ್ಘಾನಿಸ್ತಾನ ಎದುರಿನ ಪಂದ್ಯದಲ್ಲೂ ರೋಹಿತ್ ಶರ್ಮಾ ಜತೆಗೆ ಇಶಾನ್ ಕಿಶನ್ ಇನಿಂಗ್ಸ್ ಆರಂಭಿಸುವುದು ಬಹುತೇಕ ಖಚಿತ ಎನಿಸಿದೆ.