ಇಂದು ಏಷ್ಯನ್ ಗೇಮ್ಸ್ ಪದಕ ವಿಜೇತರೊಂದಿಗೆ ಪ್ರಧಾನಿ ಮೋದಿ ಸಂವಾದ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಚೀನಾದಲ್ಲಿ ನಡೆದ ಏಷ್ಯನ್‌ ಗೇಮ್ಸ್‌ನಲ್ಲಿ ಭಾರತದ ಆಟಗಾರರು 100ಕ್ಕೂ ಅಧಿಕ ಪದಕಗಳನ್ನು ಗೆದ್ದಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಪದಕ ವಿಜೇತರ ಜೊತೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಲಿದ್ದಾರೆ.

ಹ್ಯಾಂಗ್ಝೌನಲ್ಲಿ ನಡೆದ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತೀಯ ಕ್ರೀಡಾಪಟುಗಳು ಒಟ್ಟು 107 ಪದಕಗಳನ್ನು ಗೆದ್ದಿದ್ದಾರೆ. 2018ರಲ್ಲಿ ಭಾರತ ಗೆದ್ದಿದ್ದ 70 ಪದಕದ ದಾಖಲೆ ಮೀರಿ ಶತಕ ಪದಕಗಳ ಗಡಿ ಮೀರಿದ ಸಾಧನೆ ಇದಾಗಿದೆ. 28 ಚಿನ್ನ, 38 ಬೆಳ್ಳಿ ಹಾಗೂ 41 ಕಂಚಿನ ಪದಕ ಸೇರಿದಂತೆ ಭಾರತ ಒಟ್ಟು 107 ಪದಕಗಳನ್ನು ಜಯಿಸಿದೆ.

ಇಂದು ಸಂಜೆ 4:30ಕ್ಕೆ ನವದೆಹಲಿಯ ಮೇಜರ್ ಧ್ಯಾನ್ ಚಂದ್ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ. ಏಷ್ಯನ್ ಗೇಮ್ಸ್‌ನಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಕ್ರೀಡಾಪಟುಗಳನ್ನು ಅಭಿನಂದಿಸಲು ಮತ್ತು ಭವಿಷ್ಯದ ಸ್ಪರ್ಧೆಗಳಿಗೆ ಅವರನ್ನು ಪ್ರೇರೇಪಿಸಲು ಈ ಕಾರ್ಯಕ್ರಮವು ಪ್ರಧಾನಿಯವರ ಪ್ರಯತ್ನವಾಗಿದೆ ಎಂದು ಪಿಐಬಿ ಹೇಳಿಕೆಯಲ್ಲಿ ತಿಳಿಸಿದೆ.

ಈ ಕಾರ್ಯಕ್ರಮದಲ್ಲಿ ಭಾರತೀಯ ತಂಡದ ಕ್ರೀಡಾಪಟುಗಳು, ತರಬೇತುದಾರರು, ಭಾರತೀಯ ಒಲಿಂಪಿಕ್ ಅಸೋಸಿಯೇಷನ್‌ನ ಅಧಿಕಾರಿಗಳು, ರಾಷ್ಟ್ರೀಯ ಕ್ರೀಡಾ ಒಕ್ಕೂಟಗಳ ಪ್ರತಿನಿಧಿಗಳು ಮತ್ತು ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯದ ಅಧಿಕಾರಿಗಳು ಭಾಗವಹಿಸಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!