ಹೊಸದಿಗಂತ ಡಿಜಿಟಲ್ ಡೆಸ್ಕ್:
ನೀರು ತರಲು ಹೋದ ವೇಳೆ ಕಾಲು ಜಾರಿ ಹೊಂಡಕ್ಕೆ ಬಿದ್ದ ಪರಿಣಾಮ ಇಬ್ಬರು ಯುವಕರು ನೀರು ಪಾಲಾಗಿರುವ ಘಟನೆ ಬೀದರ್‌ನಲ್ಲಿ ನಡೆದಿದೆ.
ಗಣೇಶ್(10) ಮತ್ತು ಸಾಯಿನಾಥ್(15) ಮೃತ ದುರ್ದೈವಿಗಳು.
ಬೀದರ್ ತಾಲೂಕಿನ ಬೇಮಳಖೇಡ ಗ್ರಾಮದಲ್ಲಿ ಈ ದುರಂತ ನಡೆದಿದೆ. ಓರ್ವ ಬಾಲಕ ಹೊಂಡದಿಂದ ನೀರು ತರಲು ಮುಂದಾಗಿದ್ದಾನೆ. ಈ ವೇಳೆ ಕಾಲು ಜಾರಿ ಹೊಂಡಕ್ಕೆ ಬಿದ್ದಿದ್ದಾನೆ. ಬಳಿಕ ಈತನ ರಕ್ಷಣೆಗಾಗಿ ಮತ್ತೊಬ್ಬ ಬಾಲಕ ಮುಂದಾಗಿದ್ದಾನೆ. ಆದರೆ ಆತನೂ ನೀರು ಪಾಲಾಗಿದ್ದಾನೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿ ಶಾಮಕದಳ ಸಿಬ್ಬಂದಿ ಆಗಮಿಸಿ ಹೊಂಡದಲ್ಲಿದ್ದ ಬಾಲಕರ ಮೃತದೇಹವನ್ನು ಹೊರತೆಗೆದಿದ್ದಾರೆ. ಸ್ಥಳಕ್ಕೆ ಬೇಮಳಖೇಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.