ಹೊಸದಿಗಂತ ವರದಿ ಚಿತ್ರದುರ್ಗ:
ತಾಲ್ಲೂಕಿನ ಚಿಕ್ಕಗೊಂಡನಹಳ್ಳಿ ಗೊಲ್ಲರಹಟ್ಟಿ ಬಳಿ ಚಿgಚಿve ಕಾಣಿಸಿಕೊಂಡಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ.
ಗ್ರಾಮದ ಬಳಿಯ ಗುಹೇಶ್ವರ ಬೆಟ್ಟದ ಬಳಿ ಸೋಮವಾರ ತಡರಾತ್ರಿ ಕಾಣಿಸಿಕೊಂಡಿದೆ. ವಾಹನ ವಾಹನ ಸವಾರರು ಚಿರತೆಯ ಚಲನವಲನವನ್ನು ಮೊಬೈಲ್‌ನಲ್ಲಿ ವೀಡಿಯೋ ಮಾಡಿದ್ದಾರೆ.
ಕೆಲವು ದಿನಗಳ ಹಿಂದೆ ಕುರಿಗಳ ಮೇಲೆ ಚಿರತೆ ದಾಳಿ ಮಾಡಿತ್ತು ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮತ್ತೆ ಯಾವುದೇ ಅನಾಹುತ ಸಂಭವಿಸುವ ಮೊದಲೇ ಚಿರತೆಯನ್ನು ಸೆರೆ ಹಿಡಿಯಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ. ಘಟನಾ ಸ್ಥಳಕ್ಕೆ ಅರಣ್ಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.