Thursday, December 25, 2025

ಚಿತ್ರದುರ್ಗ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಚಿತ್ರದುರ್ಗದ ಜಿಲ್ಲೆ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ನಡೆದಿದೆ. ಘಟನೆಯಲ್ಲಿ 9ಕ್ಕೂ ಹೆಚ್ಚು ಜನ ಮೃತಪಟ್ಟಿದ್ದು, ಮೃತರ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ ಪರಿಹಾರ ಘೋಷಣೆ ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಇದರ ಜತೆಗೆ ಗಾಯಾಳುಗಳಿಗೆ ತಲಾ 50 ಸಾವಿರ ಪರಿಹಾರ ಘೋಷಿಸಿದ್ದಾರೆ.

ಇನ್ನು ಈ ಅಪಘಾತಕ್ಕೆ ಸಂಬಂಧಿಸಿದಂತೆ ಕಾರಣದ ಬಗ್ಗೆ ಸರಿಯಾದ ತನಿಖೆ ನಡೆಸಬೇಕು. ಹಾಗೂ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು. ಘಟನೆಯಲ್ಲಿ ಗಾಯಗೊಂಡವರು ಆದಷ್ಟು ಶೀಘ್ರ ಗುಣಮುಖರಾಗಲಿ. ಮೃತರ ಆತ್ಮಕ್ಕೆ ಶಾಂತಿ‌ ಲಭಿಸಲಿ‌ ಎಂದು ಮತ್ತೊಮ್ಮೆ ಪ್ರಾರ್ಥಿಸುತ್ತೇನೆ ಎಂದು ಎಕ್ಸ್​​ ಖಾತೆಯಲ್ಲಿ ಸಂತಾಪ ಸೂಚಿಸಿದ್ದಾರೆ.

error: Content is protected !!