ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ದೆಹಲಿಯಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ ಮಹತ್ವದ ಸಭೆ ನಡೆಯಲಿದೆ.
ಸಮಿತಿ ಅಧ್ಯಕ್ಷ ವಿನೀತ್ ಗುಪ್ತಾ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಕರ್ನಾಟಕ, ತಮಿಳುನಾಡು, ಕೇರಳ ಮತ್ತು ಪುದುಚೇರಿ ಪ್ರತಿನಿಧಿಗಳು ವರ್ಚ್ಯುವಲ್ ಮೂಲಕ ಸಬೆಯಲ್ಲಿ ಭಾಗವಹಿಸಲಿದ್ದಾರೆ.
ಅ.15ವರೆಗೆ ಪ್ರತಿದಿನ 3000 ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸುವಂತೆ ರಾಜ್ಯ ಸರ್ಕಾರಕ್ಕೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಈ ಹಿಂದೆ ಆದೇಶ ನೀಡಿತ್ತು. ಈ ಆದೇಶ ಕೊನೆಗೊಳ್ಳುತ್ತಿರುವ ಹಿನ್ನೆಲೆ ಸಭೆ ಕರೆಯಲಾಗಿದೆ. ಸಭೆಯಲ್ಲಿ ತಮಿಳುನಾಡಿಗೆ ನೀರು ಹರಿಸುವ ಕುರಿತಾಗಿ ಸಂಪೂರ್ಣ ಚರ್ಚೆಯಾಗಲಿದ್ದು, ಬಳಿಕ ನಿರ್ಧಾರ ಪ್ರಕಟಿಸಲಿದ್ದಾರೆ.