Thursday, December 25, 2025

ಅಂಜನಾದ್ರಿ ದೇವಾಲಯ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಜಟಾಪಟಿ! ಅಂಥದ್ದೇನಾಯ್ತಪ್ಪ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಪೂಜಾ ವಿಚಾರಕ್ಕೆ ಸ್ವಾಮೀಜಿಗಳ ನಡುವೆ ಗಲಾಟೆಯಾಗಿರುವ ಘಟನೆಯೊಂದು ಗಂಗಾವತಿ ತಾಲೂಕಿನ ಅಂಜನಾದ್ರಿ ದೇವಸ್ಥಾನದಲ್ಲಿ ನಡೆದಿದೆ.

ಗೋವಿಂದನಾಂದ ಸರಸ್ವತಿ ಸ್ವಾಮೀಜಿ, ದೇವಸ್ಥಾನದ ಆರ್ಚಕರಾಗಿರುವ ವಿದ್ಯಾದಾಸಬಾಬಾ ವಿರುದ್ಧ ಅವಾಚ್ಯ ಶಬ್ದಗಳನ್ನು ಬಳಸಿ ಗಲಾಟೆ ನಡೆಸಿದ್ದಾರೆಂದು ಹೇಳಲಾಗುತ್ತಿದೆ.

ಅಂಜನಾದ್ರಿ ದೇವಸ್ಥಾನದ ಆವರಣದ ಒಳಭಾಗದಲ್ಲೇ, ಆಂಜನೇಯ ಸ್ವಾಮಿಯ ಗರ್ಭಗುಡಿಯ ಸಮೀಪದಲ್ಲಿ ಗಲಾಟೆ ನಡೆದಿದ್ದು, ಈ ವೇಳೆ ಪೂಜಾ ಕಾರ್ಯಕ್ಕೆ ಅಡ್ಡಿಪಡಿಸಲಾಗಿದೆ ಎಂದು ವಿದ್ಯಾದಾಸಬಾಬಾ ಆರೋಪಿಸಿದ್ದಾರೆ. ಹಂಪಿಯ ಗೋವಿಂದನಾಂದ ಸರಸ್ವತಿ ಸ್ವಾಮೀಜಿ ಹಲ್ಲೆ ಮಾಡಿದ್ದಾರೆಂಬ ಆರೋಪವೂ ಕೇಳಿ ಬಂದಿದೆ.

ದೇವಾಲಯದ ಅರ್ಚಕ ವಿದ್ಯಾದಾಸ ಬಾಬಾ ಅವರು ಪೂಜೆ ಸಲ್ಲಿಸುತ್ತಿದ್ದ ವೇಳೆ ಸ್ಥಳಕ್ಕೆ ಬಂದ ಗೋವಿಂದಾನಂದ ಸರಸ್ವತಿ ಸ್ವಾಮೀಜಿಗಳು, ಅಂಜನಾದ್ರಿ ಬೆಟ್ಟದ ದೇವಾಲಯದಲ್ಲಿ ಹನುಮನನ್ನು ಪೂಜಿಸಲು ನನಗೆ ಮಾತ್ರ ಅಧಿಕಾರವಿದೆ ಎಂದು ಹೇಳಿದ್ದಾರೆ. ಇದು ಇಬ್ಬರ ನಡುವೆ ಮಾತಿನ ಚಕಮಕಿಗೆ ಕಾರಣವಾಗಿದೆ ಎಂದು ಹೇಳಲಾಗುತ್ತಿದೆ.

error: Content is protected !!