Thursday, December 25, 2025

CINE | ಈ ಹೀರೋಗಾಗಿ ತಮಿಳಿಗೆ ಎಂಟ್ರಿ ಕೊಡ್ತಿದ್ದಾರೆ ಕಿಂಗ್‌ ಖಾನ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಜನೀಕಾಂತ್ ನಟಿಸುತ್ತಿರುವ ‘ಜೈಲರ್ 2’ ಸಿನಿಮಾನಲ್ಲಿ ಶಾರುಖ್ ಖಾನ್ ಅತಿಥಿ ಪಾತ್ರದಲ್ಲಿ ನಟಿಸಲಿದ್ದಾರೆ ಎಂಬ ಸುದ್ದಿ ಗಟ್ಟಿಯಾಗಿಯೇ ಹರಿದಾಡುತ್ತಿದೆ.

‘ಜೈಲರ್’ ಸಿನಿಮಾ ತನ್ನ ವಿಶೇಷ ಕ್ಯಾಮಿಯೋ ಪಾತ್ರಗಳಿಂದಲೇ ದೊಡ್ಡ ಹಿಟ್ ಆಗಿತ್ತು. ಶಿವರಾಜ್ ಕುಮಾರ್, ಮೋಹನ್​​ಲಾಲ್, ಜಾಕಿ ಶ್ರಾಫ್, ತಮನ್ನಾ, ಸುನಿಲ್ ಇನ್ನೂ ಕೆಲವರು ಅತಿಥಿ ಪಾತ್ರಗಳಲ್ಲಿ ನಟಿಸಿದ್ದ ‘ಜೈಲರ್’ ಸಿನಿಮಾ ಬ್ಲಾಕ್ ಬಸ್ಟರ್ ಆಗಿತ್ತು. ಇದೀಗ ‘ಜೈಲರ್ 2’ ನಿರ್ಮಾಣ ಆಗುತ್ತಿದ್ದು, ಈ ‘ಕ್ಯಾಮಿಯೋ ಗೇಮ್’ ಅನ್ನು ಇನ್ನೂ ದೊಡ್ಡ ಹಂತಕ್ಕೆ ಕೊಂಡೊಯ್ಯುವುದು ನಿರ್ದೇಶಕ ನೆಲ್ಸನ್ ಯೋಜನೆ.

ಇದೇ ಕಾರಣಕ್ಕೆ ‘ಜೈಲರ್ 2’ ಸಿನಿಮಾಕ್ಕಾಗಿ ಶಾರುಖ್ ಖಾನ್ ಅವರನ್ನೇ ಕರೆತರಲು ನೆಲ್ಸನ್ ಸಜ್ಜಾಗಿದ್ದಾರೆ. ಆದರೆ ಶಾರುಖ್ ಖಾನ್ ಈ ಆಫರ್ ಅನ್ನು ಒಪ್ಪಿಕೊಳ್ಳಲು ಕಾರಣವೂ ಸಹ ಇದೆ. ಈ ಹಿಂದೆ 2011 ರಲ್ಲಿ ಶಾರುಖ್ ಖಾನ್ ‘ರಾ ಒನ್’ ಹೆಸರಿನ ಭಾರಿ ಅದ್ಧೂರಿ ಸಿನಿಮಾ ಮಾಡಿದ್ದರು.

ಆ ಸಿನಿಮಾಕ್ಕೆ ಭಾರಿ ದೊಡ್ಡ ಬಂಡವಾಳ ಹಾಕಿ, ಅದ್ಧೂರಿ ಪ್ರಚಾರ ಮಾಡಿದ್ದರು, ಅದ್ಧೂರಿ ಸೆಟ್​​ಗಳು, ಹಾಲಿವುಡ್ ಲೆವೆಲ್ ವಿಎಫ್​​ಎಕ್ಸ್ ಬಳಸಿದ್ದರು. ಆ ಸಿನಿಮಾನಲ್ಲಿ ರಜನೀಕಾಂತ್ ಅವರು ಅತಿಥಿ ಪಾತ್ರದಲ್ಲಿ ನಟಿಸಿದ್ದರು. ಈಗ ‘ಜೈಲರ್ 2’ ಸಿನಿಮಾದ ಅತಿಥಿ ಪಾತ್ರದಲ್ಲಿ ನಟಿಸುವ ಮೂಲಕ ಫೇವರ್‌ ರಿಟರ್ನ್‌ ಮಾಡಲಿದ್ದಾರೆ.

error: Content is protected !!