ಚಿನ್ನದ ಸರ ಕಿತ್ತು ಪರಾರಿಯಾಗಿದ್ದ ಆರೋಪಿಗಳ ಬಂಧನ

ಹೊಸದಿಗಂತ ವರದಿ, ಮಳವಳ್ಳಿ :

ಹಾಡ ಹಗಲೇ ತಾಲೂಕಿನ ಅಮೃತೇಶ್ವರನಹಳ್ಳಿ ಗ್ರಾಮದ ಅಂಗಡಿ ಮಾಲೀಕನಿಂದ ಚಿನ್ನದ ಸರ ಕಿತ್ತು ಪರಾರಿಯಾಗಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಮಳವಳ್ಳಿ ಪೊಲೀಸರು ಯಶ್ವಸಿಯಾಗಿದ್ದಾರೆ.

ಪಟ್ಟಣದ ಗಿರೀಶ್(22), ಸುಭಾಷ್(21) ಹಾಗೂ ಮೈಸೂರಿನ ಕಿರಣ್(20) ಬಂಧಿತ ಆರೋಪಿಗಳು. ಆ.17ರಂದು ಕನಕಪುರದಲ್ಲಿ ಬೈಕ್ ವೊಂದನ್ನು ಕಳವು ಮಾಡಿದ್ದ ಆರೋಪಿ ಗಳು ಮಧ್ಯಾಹ್ನ ಅಮೃತೇಶ್ವರನಹಳ್ಳಿ ಗ್ರಾಮದ ಅಂಗಡಿವೊಂದರಲ್ಲಿ ದಿನಸಿ ಸಾಮಾಗ್ರಿ ಖರೀದಿಸುವ ನೆಪದಲ್ಲಿ ಮಾಲೀಕನ ಕತ್ತಿನಲ್ಲಿದ್ದ ಸುಮಾರು 30 ಗ್ರಾಂ.ತೂಕದ ಚಿನ್ನದ ಸರವನ್ನು ಕಿತ್ತು ಪರಾರಿಯಾಗಿದ್ದರು. ನಂತರ ತಾಲೂಕಿನ ರಾವಣಿ ಗ್ರಾಮದಲ್ಲಿ ಆರೋಪಿಗಳು ಮನೆ ಮುಂದೆ ನಿಲ್ಲಿಸಿ ಬೈಕ್ ವೊಂದನ್ನು ಕಳವು ಮಾಡಿದ್ದರು. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ಗಳು ದಾಖಲಾಗಿದ್ದವು. ತನಿಖೆಗಾಗಿ ತಂಡವೊಂದನ್ನು ರಚಿಸಲಾಗಿತ್ತು.

ಎರಡು ದಿನಗಳ ಹಿಂದೆ ಪಟ್ಟಣದಲ್ಲಿ ಗಸ್ತಿನಲ್ಲಿದ್ದ ಪೋಲೀಸರು ಅನಾಮಾನಾ ಸ್ಪದವಾಗಿ ತಿರುಗಾಡುತ್ತಿದ್ದ ಆರೋಪಿ ಗಳನ್ನು ಬಂಧಿಸಿ ತೀವ್ರ ವಿಚಾರಣೆಗೆ ಒಳ ಪಡಿಸಿದಾಗ ಅಮೃತೇಶ್ವರನಹಳ್ಳಿ ಸರ ಕಳ್ಳತನ ಪ್ರಕರಣ ಹಾಗೂ ಬೈಕ್ ಕಳವು ಪ್ರಕರಣದಲ್ಲಿ ಭಾಗಿಯಾಗಿದ್ದಾಗಿ ಆರೋ ಪಿಗಳು ತಪ್ಪೊಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತ ಆರೋಪಿಗಳಿಂದ ಕಳವು ಮಾಡಿದ್ದ ಎರಡು ಬೈಕ್‌ಗಳು ಹಾಗೂ 25 ಗ್ರಾಂ. ಚಿನ್ನದ ಸರವನ್ನು ವಶಪಡಿಸಿಕೊಂಡಿ ದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!