ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಸ್ರೇಲ್ ಮೇಲೆ ಹಮಾಸ್ ಉಗ್ರರು ನಡೆಸುತ್ತಿರುವ ದಾಳಿಯಲ್ಲಿ ಅಮೆರಿಕ ದೇಶದ 22 ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಅಮೆರಿಕ ಶ್ವೇತಭವನವು ಹೇಳಿದೆ.
ಇಸ್ರೇಲ್ ಹಮಾಸ್ ದಾಳಿಯಲ್ಲಿ ಈವರೆಗೆ 22 ಅಮೆರಿಕನ್ನರು ಪ್ರಾಣ ಕಳೆದುಕೊಂಡಿದ್ದು, 17 ಮಂದಿ ಇನ್ನೂ ಪತ್ತೆಯಾಗಿಲ್ಲ ಎಂದು ಬುಧವಾರ ವರದಿಯಾಗಿದೆ. ಜೊತೆಗೆ ಮುಂದಿನ ದಿನಗಳಲ್ಲಿ ಸಾವಿನ ಸಂಖ್ಯೆಯೂ ಏರಿಕೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.
ಈ ಕುರಿತು ಶ್ವೇತಭವನದ ರಾಷ್ಟ್ರೀಯ ಭದ್ರತಾ ವಕ್ತಾರ ಜಾನ್ ಕಿರ್ಬಿ ಅವರು ಹೇಳುವ ಪ್ರಕಾರ ಈಗಾಗಗಲೇ ಹಲವಾರು ಅಮೆರಿಕನ್ನರನ್ನು ಹಮಾಸ್ ಉಗ್ರರು ಒತ್ತೆಯಾಳುಗಳಾಗಿ ಇರಿಸಿದ್ದಾರೆ. ಒತ್ತೆಯಾಳುಗಳನ್ನು ರಕ್ಷಿಸಲು ಅಮೆರಿಕ ಸರ್ಕಾರವು ಇಸ್ರೇಲ್ನೊಂದಿಗೆ ಸಂಪರ್ಕದಲ್ಲಿದ್ದು, ಮಾತುಕತೆ ನಡೆಸುತ್ತಿದೆ ಎಂದು ಹೇಳಿದ್ದಾರೆ.
ಇಲ್ಲಿಯವರೆಗೆ 22 ಅಮೆರಿಕನ್ನರು ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ. ನಾಪತ್ತೆಯಾದವರ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಮುಂದಿನ ದಿನಗಳಲ್ಲಿ ಈ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ದಾಳಿಯಲ್ಲಿ ಸಾವನ್ನಪ್ಪಿದವರ ಎಲ್ಲ ಸಂತ್ರಸ್ತ ಕುಟುಂಬಗಳಿಗೆ ಸಾಂತ್ವನ ಹೇಳು ಮೂಲಕ ಧೈರ್ಯ ತುಂಬಿದ್ದಾರೆ.
ನಾವು ಪ್ರತೀ ಕ್ಷಣ ಇಸ್ರೇಲ್ನೊಂದಿಗೆ ಸಂಪರ್ಕದಲ್ಲಿದ್ದೇವೆ, ನಮ್ಮ ಪ್ರಜೆಗಳನ್ನು ರಕ್ಷಿಸಲು ಮಾತುಕತೆ ನಡೆಸುತ್ತಲೇ ಇದ್ದೇವೆ. ಈ ಕುರಿತು ಕೆಲವು ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದೇವೆ ಎಂದು ಜಾನ್ ಕಿರ್ಬಿ ಹೇಳಿದ್ದಾರೆ.