ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಆನೇಕಲ್ ತಾಲೂಕಿನ ಅತ್ತಿಬೆಲೆ ಪಟಾಕಿ ಅಗ್ನಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ.
ಗೆಳೆಯನ ಹುಟ್ಟುಹಬ್ಬಕ್ಕೆ ಪಟಾಕಿ ಖರೀದಿಸಲು ಹೋಗಿದ್ದ ವ್ಯಕ್ತಿ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ.
ಬೊಮ್ಮನಹಳ್ಳಿಯ ಗೋರೇಬಾವಿಪಾಳ್ಯದ ನಿವಾಸಿ ವೆಂಕಟೇಶ್ ಸೆಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಸ್ನೇಹಿತನ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಲು ಪಟಾಕಿ ಖರೀದಿಸಲು ಬಾಲಾಜಿ ಟ್ರೇಡರ್ಸ್ಗೆ ಬಂದಿದ್ದರು. ಇದೇ ವೇಳೆ ಅವಘಡ ಸಂಭವಿಸಿದ್ದು, ಗಂಭೀರವಾಗಿ ಗಾಯಗೊಂಡಿದ್ದರು.
ತಕ್ಷಣವೇ ಸೆಂಟ್ ಜಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೇ ವೆಂಕಟೇಶ್ ಮೃತಪಟ್ಟಿದ್ದಾರೆ.