ಕಲ್ಲಿದ್ದಲು ಗಣಿ ಕುಸಿದು ಮೂವರು ದಾರುಣ ಸಾವು!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕಲ್ಲಿದ್ದಲು ಗಣಿ ಕುಸಿದು ಮೂವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಪಶ್ಚಿಮ ಬಂಗಾಳದ ಪಶ್ಚಿಮ್ ಬರ್ಧಮಾನ್ ಜಿಲ್ಲೆಯ ರಾಣಿಗಂಜ್​ನಲ್ಲಿ ನಡೆದಿದೆ.

ನಾರಾಯಣಕುರಿಯ ಈಸ್ಟರ್ನ್ ಕೋಲ್‌ಫೀಲ್ಡ್ ಲಿಮಿಟೆಡ್‌ನಲ್ಲಿ (ಇಸಿಎಲ್) ಗಣಿ ಕುಸಿದಿದ್ದು, ಮೂರು ಮೃತದೇಹಗಳನ್ನು ಗುರುವಾರ ಬೆಳಗ್ಗೆ ಹೊರತೆಗೆಯಲಾಗಿದೆ. ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಅಲ್ಲಿನ ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!