ಕರ್ನಾಟಕಕ್ಕೆ ಮತ್ತೆ ಶಾಕ್‌: ತಮಿಳುನಾಡಿಗೆ 15 ದಿನಗಳ ಕಾಲ 3,000 ಕ್ಯೂಸೆಕ್‌ ಕಾವೇರಿ ನೀರು ಬಿಡಲು ಆದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದಿಂದಲೂ ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ತಲಾ 3,000 ಕ್ಯೂಸೆಕ್‌ ಕಾವೇರಿ ನೀರು ಹರಿಸುವಂತೆ ಆದೇಶ ಹೊರಡಿಸಲಾಗಿದೆ.

ದೆಹಲಿಯಲ್ಲಿ ಶುಕ್ರವಾರ ನಡೆದ ಕಾವೇರಿ ನೀರು ಹಂಚಿಕೆ ವಿಚಾರದ ಕುರಿತು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯೂಎಂಎ) ಕರ್ನಾಟಕಕ್ಕೆ ಪುನಃ ಶಾಕ್‌ ನೀಡಿದೆ.

ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ತಲಾ 3,000 ಕ್ಯೂಸೆಕ್‌ ನೀರನ್ನು ಹರಿಸುವಂತೆ ಆದೇಶವನ್ನು ಹೊರಡಿಸಿದೆ. ಇನ್ನು ಕಳೆದೆರಡು ದಿನಗಳ ಹಿಂದೆ ಕಾವೇರಿ ನೀರು ನಿಯಂತ್ರಣಾ ಸಮಿತಿ (ಸಿಡಬ್ಲ್ಯೂಆರ್‌ಸಿ)ಯು 3,000 ಕ್ಯೂಸೆಕ್‌ ನೀರು ಹರಿಸುವಂತೆ ಆದೇಶ ಕರ್ನಾಟಕಕ್ಕೆ ಆದೇಶ ನೀಡಲಾಗಿತ್ತು. ಈಗ (ಸಿಡಬ್ಲ್ಯೂಆರ್‌ಸಿ)ಯ ಆದೇಶವನ್ನು ಸಿಡಬ್ಲ್ಯೂಎಂಎ ಎತ್ತಿ ಹಿಡಿದಿದೆ. ಆದರೆ, ಇದರಿಂದ ಕರ್ನಾಟಕದ ಹೋರಾಟಕ್ಕೆ ತೀವ್ರ ಹಿನ್ನಡೆ ಉಂಟಾಗಿದೆ.

ಅ.16ರಿಂದ ಮತ್ತೆ 15 ದಿನಗಳ ಕಾಲ ತಮಿಳುನಾಡಿಗೆ ನಿತ್ಯ 3 ಸಾವಿರ ಕ್ಯುಸೆಕ್‌ನಂತೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರುವು ಆದೇಶ ನೀಡಿದೆ.

ಕಳೆದೆರಡು ದಿನಗಳ ಹಿಂದೆ ಬುಧವಾರ ನಡೆದಿದ್ದ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆಯಲ್ಲಿ ವಾದ ಮಂಡನೆ ಮಾಡಿದ್ದ ಕರ್ನಾಟಕ ಪರ ಅಧಿಕಾರಿಗಳು, ರಾಜ್ಯದಲ್ಲಿ ಮುಂಗಾರು ಕೈ ಕೊಟ್ಟಿದ್ದು, ಕಾವೇರಿ ಕೊಳ್ಳದ ಜಲಾಶಯಗಳಲ್ಲಿ ನೀರಿನ ಕೊರತೆಯಿದೆ. ರಾಜ್ಯದಲ್ಲಿ ತೀವ್ರ ಬರದ ಪರಿಸ್ಥಿತಿಯಿದ್ದು, ಅ.10ರವರೆಗೆ ಕಾವೇರಿ ಕೊಳ್ಳದ ನಾಲ್ಕು ಜಲಾಶಯಗಳ ಒಳಹರಿವಿನಲ್ಲಿ ಶೇ.50.89ರಷ್ಟು ಕೊರತೆಯಾಗಿದೆ. ಜೊತೆಗೆ, ಮುಂದಿನ ದಿನಗಳಲ್ಲಿ ಈ ಭಾಗದ ಜನರಿಗೆ ಕುಡಿವ ನೀರಿಗೂ ಕೊರತೆಯಾಗುವ ಸಾಧ್ಯತೆಯಿದೆ. ಅಲ್ಲದೆ, ಜಲಾಶಯಗಳಿಗೆ ಒಳಹರಿವಿನ ಪ್ರಮಾಣ ಹೆಚ್ಚಾಗುವ ಯಾವುದೇ ಆಶಾಭಾವ ಇಲ್ಲ. ಹೀಗಾಗಿ, ತಮಿಳುನಾಡಿಗೆ ನೀರು ಬಿಡುಗಡೆ ಮಾಡುವ ಸ್ಥಿತಿಯಲ್ಲಿ ನಾವಿಲ್ಲ ಎಂದು ಕರ್ನಾಟದ ಅಧಿಕಾರಿಗಳು ವಾದಿಸಿದ್ದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!