ಹೊಸದಿಗಂತ ಡಿಜಿಟಲ್ ಡೆಸ್ಕ್:
ಚೀನಾದಲ್ಲಿ ಇಸ್ರೇಲ್ ರಾಜತಾಂತ್ರಿಕ ಅಧಿಕಾರಿಗೆ ಚಾಕು ಇರಿಯಲಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ರಾಜತಾಂತ್ರಿಕರೊಬ್ಬರ ಮೇಲೆ ದಾಳಿ ನಡೆಸಿದ್ದು, ಭಯೋತ್ಪಾದಕ ದಾಳಿ ನಡೆದಿದೆ ಎಂದು ಶಂಕಿಸಲಾಗಿದೆ. ಸದ್ಯ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಇಸ್ರೇಲ್ ಯುದ್ಧ ಸಚಿವಾಲಯ ಶುಕ್ರವಾರ ತಿಳಿಸಿದೆ.
ಇಸ್ರೇಲ್ ಮತ್ತು ಹಮಾಸ್ ನಡುವೆ ನಡೆಯುತ್ತಿರುವ ಉದ್ವಿಗ್ನತೆಯ ಮಧ್ಯೆ ಈ ಬೆಳವಣಿಗೆ ನಡೆದಿದೆ. ಇಸ್ರೇಲಿಗಳು ಮತ್ತು ಯಹೂದಿಗಳಿಗೆ ವಿಶ್ವಾದ್ಯಂತ ಹೆಚ್ಚಿನ ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ.