ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಶ್ರೀ ಆದಿಚುಂಚನಗಿರಿ ಕ್ಷೇತ್ರದಲ್ಲಿ ಮಹಾಲಯ ಅಮವಾಸ್ಯೆಯ ಪ್ರಯುಕ್ತ ಇಂದು ವಿಶೇಷ ಪೂಜೆಯನ್ನು ನೆರವೇರಿಸಲಾಗಿದೆ.
ಕಾಲಭೈರವೇಶ್ವರ ಸ್ವಾಮಿಯ ಸಾನಿಧ್ಯದಲ್ಲಿ ಜಗದ್ಗುರು ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ವಿಶೇಷ ಪೂಜೆಯನ್ನು ನೆರವೇರಿಸಿದ್ದಾರೆ.
ಶರವನ್ನವರಾತ್ರಿ ಪ್ರಯುಕ್ತ ಮೊದಲನೆ ದಿನವಾದ ಇಂದು ಬೆಳಗ್ಗಿನಿಂದಲೇ ಭೈರವ ಹೋಮ, ಗಂಗಾರಧೇಶ್ವರ ಸ್ವಾಮಿಯ ರುದ್ರಾಭಿಷೇಕ, ಕಾಲಭೈರವೇಶ್ವರ ಸ್ವಾಮಿಯ ಮಹಾಭಿಷೇಕ ನೆರವೇರಿಸಲಾಗಿದ್ದು, ಸಾವಿರಾರು ಭಕ್ತರು ಪೂಜೆಯನ್ನು ಕಣ್ತುಂಬಿಕೊಂಡಿದ್ದಾರೆ.