ಹೊಸದಿಗಂತ ವರದಿ ಹುಬ್ಬಳ್ಳಿ:
ವಿಶ್ವ ಕಪ್ ಕ್ರಿಕೆಟ್ ಬೆಟಿಂಗ್ ನಡೆಯುತ್ತಿದ್ದ ಅಡ್ಡೆಯ ಹಳೆ ಹುಬ್ಬಳ್ಳಿ ಪೊಲೀಸರು ದಾಳಿ ಮಾಡಿದ್ದು, ಈ ವೇಳೆ ಆರು ಜನರನ್ನು ಬಂಧಿಸಿದ್ದಾರೆ. ಬಂಧತರಿಂದ 17,500ರೂಪಾಯಿ ವಶಪಡಿಸಿಕೊಳ್ಳಲಾಗಿದೆ.
ಶನಿವಾರ ನಡೆದ ಭಾರತ ಪಾಕಿಸ್ತಾನ ವಿಶ್ವಕಪ್ ಪಂದ್ಯದ ವೇಳೆ ಆರು ಜನರು ಬೆಟ್ಟಿಂಗ್ ನಲ್ಲಿ ತೊಡಗಿದ್ದರು. ಖಚಿತ ಮಾಹಿತಿ ಆಧರಿಸಿ ಪೊಲೀಸರು ಹೆಗ್ಗೇರಿಯ ಸಿದ್ಧಾರೂಢ ನಗರ, ಅರವಿಂದ ನಗರ ಹಾಗೂ ಆನಂದ ನಗರದ ಅಡ್ಡೆಗಳ ಮೇಲೆ ದಾಳಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಆರು ಜನರನ್ನು ಬಂಧಿಸಿದ್ದು, ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಮೂರು ಪ್ರತ್ಯೇಕ ಪ್ರಕರಣ ದಾಖಲಾಗಿವೆ.