ಹೊಸದಿಗಂತ ವರದಿ ಮೈಸೂರು:
ಮುಖ್ಯ ಮಂತ್ರಿ ಸಿದ್ದರಾಮಯ್ಯ ಭಾನುವಾರ ಬೆಳಗ್ಗೆ ನಾಡ ಶಕ್ತಿ ದೇವತೆ ತಾಯಿ ಚಾಮುಂಡೇಶ್ವರಿಯ ದರುಶನ ಪಡೆದರು.
ಚಾಮುಂಡಿ ಬೆಟ್ಟದಲ್ಲಿ ಆಯೋಜಿಸಲಾಗಿದ್ದ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ ನೀಡಲೆಂದು ಬೆಟ್ಟಕ್ಕೆ ಆಗಮಿಸಿದ ಅವರಿಗೆ ಪೂರ್ಣ ಕುಂಭ ಸ್ವಾಗತವನ್ನು ನೀಡಿ ಬರಮಾಡಿಕೊಳ್ಳಲಾಯಿತು.
ದಸರಾ ಉದ್ಘಾಟಕರಾದ ಸಂಗೀತ ನಿರ್ದೇಶಕ ಹಂಸಲೇಖರೊಂದಿಗೆ ಜಾನಪದ ಕಲಾ ತಂಡಗಳೊಂದಿಗೆ ಮೆರವಣಿಗೆ ಮೂಲಕ ದೇವಸ್ಥಾನಕ್ಕೆ ತೆರಳಿದ ಸಿದ್ದರಾಮಯ್ಯ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ದರುಶನ ಪಡೆದು ಪ್ರಾರ್ಥನೆ ಸಲ್ಲಿಸಿದರು. ಅವರಿಗೆ ಸಚಿವರಾದ ಕೆ.ಹೆಚ್.ಮುನಿಯಪ್ಪ, ಶಾಸಕರಾದ ಎ.ಆರ್.ಕೃಷ್ಣ ಮೂರ್ತಿ ಮತ್ತಿತರರು ಸಾಥ್ ನೀಡಿದರು.