ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಡುಗೆ ಎಣ್ಣೆ ತುಂಬಿದ್ದ ಲಾರಿ ಪಲ್ಟಿಯಾಗಿ ಬಿದ್ದಿರುವ ಘಟನೆ ವಿಜಯನಗರ ಜಿಲ್ಲೆಯ ಬಣವಿಕಲ್ಲು ಗ್ರಾಮದಲ್ಲಿ ನಡೆದಿದೆ.
ಬೆಂಗಳೂರಿಗೆ ಚಲಿಸುತ್ತಿದ್ದ ಅಡುಗೆ ಎಣ್ಣೆ ತುಂಬಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ ಪಲ್ಟಿಯಾಗಿ ಬಿದ್ದಿದೆ. ಅದೃಷ್ಟವಶಾತ್ ಲಾರಿ ಚಾಲಕ, ಕ್ಲೀನರ್ ಅಪಾಯದಿಂದ ಪಾರಾಗಿದ್ದಾರೆ. ಆದರೆ ಲಾರಿಯಲ್ಲಿದ್ದ ಅಡುಗೆ ಎಣ್ಣೆ ಮಾತ್ರ ರಸ್ತೆಗೆ ಹರಿದು ಹೋಗಿದೆ. ಇದನ್ನು ಗಮನಿಸಿದ ಜನ ಎಣ್ಣೆ ತುಂಬಿಕೊಳ್ಳಲು ಮುಗಿಬಿದ್ದಿದ್ದಾರೆ.
ಘಟನಾ ಸ್ಥಳಕ್ಕೆ ಕಾನಾಹೊಸಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.