ಎರಡು ಕರಡಿಗಳ ದಾಳಿ: ಯುವಕನಿಗೆ ಗಂಭೀರ ಗಾಯ

ಹೊಸದಿಗಂತ ವರದಿ, ದಾವಣಗೆರೆ:

ಎರಡು ಕರಡಿಗಳು ದಾಳಿ ನಡೆಸಿದ ಪರಿಣಾಮ ಜಮೀನಿನಿಂದ ಹಿಂದಿರುಗುತ್ತಿದ್ದ ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಯುವಕನನ್ನು ದಾವಣಗೆರೆ ಜಿಲ್ಲಾಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿ ತಾಲೂಕು ರಂಗಾಪುರ ಗ್ರಾಮದ ನಿವಾಸಿ ಆನಂದ(೨೮ ವರ್ಷ) ಗಾಯಾಳು ಯುವಕ. ಕೆ.ಕಲ್ಲಹಳ್ಳಿ ಗ್ರಾಮದ ಸಂಬಂಧಿಕರ ಮನೆಯಲ್ಲಿದ್ದ ಇವರು, ಜಮೀನಿಗೆ ನೀರು ಹಾಯಿಸಲು ಶನಿವಾರ ಬೆಳಗ್ಗೆ ಹೋಗಿ ವಾಪಾಸ್ಸು ಬರುವಾಗ, ದಾರಿ ಮಧ್ಯೆ ಹಳ್ಳದಲ್ಲಿ ಅಡಗಿ ಕುಳಿತಿದ್ದ ಎರಡು ಕರಡಿಗಳು ದಾಳಿ ನಡೆಸಿವೆ. ಘಟನೆಯಲ್ಲಿ ಆನಂದ ಅವರ ಮುಖ ಹಾಗೂ ತಲೆಗೆ ಗಂಭೀರ ಗಾಯಗಳಾಗಿವೆ. ಕೂಡಲೇ ಅವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ ನಂತರ ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ವಿಷಯ ತಿಳಿದ ಪೊಲೀಸರು ಘಟನಾ ಸ್ಥಳ ಹಾಗೂ ಆಸ್ಪತ್ರೆಗೆ ಭೇಟಿ ಪರಿಶೀಲಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!