ಹೊಸದಿಗಂತ ವರದಿ ಪುತ್ತೂರು:
ಈಜಲು ಹೊಳೆಗೆ ಹೋಗಿ ನಾಪತ್ತೆಯಾಗಿದ್ದ ಯುವಕನ ಮೃತದೇಹ ಅ.16ರಂದು ಬೆಳಗ್ಗೆ ಪತ್ತೆಯಾಗಿದೆ.
ಮಾಡಾವು ಕಟ್ಟತ್ತಾರು ನಿವಾಸಿ ಹಂಝ ಎಂಬವರ ಪುತ್ರ ತಸ್ಲೀಮ್ (17) ಮೃತಪಟ್ಟವರು.
ಅ.15ರಂದು ಸಂಜೆ ಗೆಳೆಯರ ಜೊತೆಗೂಡಿ ಅರಿಕ್ಕಿಲ ಸಮೀಪದ ಎರಕ್ಕಲ ಎಂಬಲ್ಲಿ ಹೊಳೆಗೆ ಈಜಲು ತೆರಳಿದ್ದ ವೇಳೆ ಘಟನೆ ಸಂಭವಿಸಿತ್ತು. ಯುವಕ ನಾಪತ್ತೆಯಾಗುತ್ತಿದ್ದಂತೆ ಸ್ನೇಹಿತರು ಮನೆಯವರಿಗೆ, ಸ್ಥಳೀಯರಿಗೆ ವಿಷಯ ತಲುಪಿಸಿದ್ದರು.
ತಕ್ಷಣ ಸ್ಥಳೀಯರು ಹೊಳೆಯಲ್ಲಿ ಹುಡುಕಾಟ ನಡೆಸಿದರಾದರೂ ಮೃತದೇಹ ಪತ್ತೆಯಾಗಿರಲಿಲ್ಲ. ಬಳಿಕ ಮುಳುಗು ತಜ್ಞರು ಕಾರ್ಯಾಚರಣೆ ಮುಂದುವರಿಸಿದ್ದರು. ಆದರೂ, ಮೃತದೇಹ ಪತ್ತೆಯಾಗಿರಲಿಲ್ಲ. ಸೋಮವಾರ ಬೆಳಗ್ಗೆ ಹುಡುಕಾಟ ಮುಂದುವರಿಸಿದಾಗ ಈಜಲು ತೆರಳಿದ್ದ ಸ್ಥಳದ ಆಸುಪಾಸಿನಲ್ಲಿ ಮೃತದೇಹ ಪತ್ತೆಯಾಗಿದೆ.