ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಮಾಸ್ ಉಗ್ರರ ದಾಳಿಯಿಂದಾಗಿ ಇಸ್ರೇಲ್ ನಷ್ಟ ಅನುಭವಿಸಿದೆ. ಈವರೆಗೆ ಹಮಾಸ್-ಇಸ್ರೇಲ್ ನಡುವಿನ ಸಂಘರ್ಷದಿಂದಾಗಿ 1300ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ, ಅನೇಕರು ಗಾಯಗೊಂಡಿದ್ದಾರೆ. ಅಲ್ಲದೇ ಅನೇಕ ಮಂದಿಯನ್ನು ಹಮಾಸ್ ಉಗ್ರರು ಒತ್ತೆಯಾಳಾಗಿಟ್ಟುಕೊಂಡಿದ್ದಾರೆ. ಈ ನಡುವೆ ಮೊದಲ ಬಾರಿಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಸಂತ್ರಸ್ತ ಕುಟುಂಬಗಳನ್ನು ಭೇಟಿ ಮಾಡಿದ್ದಾರೆ.
ಭಾನುವಾರ ಸಂಜೆ ಇಸ್ರೇಲಿ ಒತ್ತೆಯಾಳುಗಳ ಸಂಬಂಧಿಕರನ್ನು ನೆತನ್ಯಾಹು ಅವರು ಭೇಟಿ ಮಾಡಿದ ಫೋಟೋಗಳನ್ನು ಇಸ್ರೇಲ್ ಪ್ರಧಾನಿ ಕಚೇರಿ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ. ಇದರಲ್ಲಿ ಅವರು ಸಂತ್ರಸ್ತ ಕುಟುಂಬಗಳಿಗೆ ಸಾಂತ್ವನ ಹೇಳುತ್ತಿರುವುದು ಕಂಡುಬಂದಿದೆ.
ಗಾಜಾದಲ್ಲಿ ಬಂಧನಕ್ಕೊಳದಾವರ ಬಗ್ಗೆ ಸರ್ಕಾರವು ನಿರ್ಲಕ್ಷಿಸಿದೆ ಎಂಬ ಟೀಕೆಗಳು ಕೇಳಿಬರುತ್ತಿತ್ತು. ಈ ನಡುವೆಯೇ ಪ್ರಧಾನಿ ಸಂತಸ್ತ ಕುಟುಂಬಗಳನ್ನು ಭೇಟಿ ಮಾಡಿ, ತಬ್ಬಿ ಸಂತೈಸಿದ್ದಾರೆ.