ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ವಿದ್ಯುತ್ ಕೊರತೆ ಇದೆ, ಹೀಗಾಗಿ ಲೋಡ್ ಶೆಡ್ಡಿಂಗ್ ಮಾಡ್ತಿದ್ದೇವೆ. ರೈತರ ನೀರಾವರಿ ಪಂಪ್ ಸೆಟ್ಗಳಿಗೆ ಸಮರ್ಪಕವಾಗಿ ವಿದ್ಯುತ್ ಪೂರೈಕೆಯಾಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
2-3 ಸಾವಿರ ಮೆಗಾವ್ಯಾಟ್ ವಿದ್ಯುತ್ ಕೊರತೆ ಇದೆ. ಈ ಹಿಂದಿ ಸರ್ಕಾರದಲ್ಲಿ ಹೆಚ್ಚಿನ ವಿದ್ಯುತ್ ಉತ್ಪಾದನೆ ಆಗಿಲ್ಲ, ಹಾಗಾಗಿ ಇಂದು ಎಲ್ಲರೂ ಸಮಸ್ಯೆ ಎದುರಿಸುವಂತೆ ಆಗುತ್ತಿದೆ ಎಂದಿದ್ದಾರೆ.
ಹೊರಗಿನಿಂದ ವಿದ್ಯುತ್ ಖರೀದಿ ಸೂಚನೆ ನೀಡಿದ್ದೇನೆ, ಹೆಚ್ಚೆಚ್ಚು ವಿದ್ಯುತ್ ಉತ್ಪಾದನೆಗೆ ಸೂಚನೆ ನೀಡಲಾಗಿದೆ. ರೈತರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಬೇಕಾದ ಕ್ರಮಗಳನ್ನು ಕೈಗೊಳ್ಳುತ್ತಿದ್ದೇವೆ ಎಂದಿದ್ದಾರೆ.
ರೈತರು ನಿರಂತರವಾಗಿ ನಾಲ್ಕು ಗಂಟೆಗಳ ಕಾಲ ತ್ರೀ ಫೇಸ್ ವಿದ್ಯುತ್ ನೀಡಿದರೆ ಸಾಕು ಎಂದಿದ್ದಾರೆ, ಆದರೆ ಐದು ಗಂಟೆ ವಿದ್ಯುತ್ ನೀಡಲು ಸೂಚನೆ ನೀಡಿದ್ದೇನೆ ಎಂದಿದ್ದಾರೆ.