ಹೊಸದಿಗಂತ ವರದಿ ಬಾಗಲಕೋಟೆ:
ಬಾಲ್ಯವಿವಾಹ ಹಾಗೂ ಹೆಣ್ಣು ಭ್ರೂಣ ಹತ್ಯೆ ನಿಷೇಧ ಕಾಯ್ದೆಗಳ ಸಮರ್ಪಕ ಅನುಷ್ಠಾನದಲ್ಲಿ ಕಾಯ್ದೆಗಳ ಕುರಿತು ಅರಿವು ಅಗತ್ಯವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ವಿಜಯ ನೇರಳೆ ಹೇಳಿದರು.
ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‍ನಲ್ಲಿ ಸೋಮವಾರ ರಾಜ್ಯ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವಕೀಲರ ಸಂಘದ ಆಶ್ರಯದಲ್ಲಿ ಹಮ್ಮಿಕೊಂಡ ಬಾಲ್ಯವಿವಾಹ ಮುಕ್ತ ಅಭಿಯಾನ, ಪ್ರಸವ ಪೂರ್ಣ ಹೆಣ್ಣು ಭ್ರೂನ ಹತ್ಯೆ ನಿಷೇಧ ಕುರಿತ ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕಾಯ್ದೆಗಳ ಅನುಷ್ಠಾನದಲ್ಲಿ ಸಂಪೂರ್ಣ ಅರಿವು ಇರಬೇಕಾಗುತ್ತದೆ. ಪ್ರಾಮಾಣಿಕ, ಜವಾಬ್ದಾರಿಯುತವಾಗಿ ಕೆಲಸ ಮಾಡಿದಲ್ಲಿ ಬಾಲ್ಯವಿವಾಹದಂತಹ ಅನಿಷ್ಟ ಪದ್ದತಿಗಳನ್ನು ತೊಡೆದು ಹಾಕಲು ಸಾದ್ಯ. ಸರಿಯಾದ ವಯಸ್ಸಿನಲ್ಲಿ ಮದುವೆಯಾಗದೇ ಬಾಲ್ಯಾವಸ್ಥೆಯಲ್ಲಿ ಮದುವೆಯಾದಲ್ಲಿ ಆ ಬಾಲಕಿಯ ಶಿಕ್ಷಣ ನಿಂದು ಹೋಗುವದರ ಜೊತೆಗೆ ಆರೋಗ್ಯಯುತವಾಗಿ ಬೆಳೆಯಲು ಸಾಧ್ಯವಾಗುವದಿಲ್ಲ. ಇದರಿಂದ ಉತ್ತಮ ಸಾಮಾಜ ನಿರ್ಮಾಣ ಮಾಡಲು ಸಾಧ್ಯವಾಗುವದಿಲ್ಲ. ಕಾಯ್ದೆ ಅನುಷ್ಠಾನದಲ್ಲಿ ಜವಾಬ್ದಾರಿಯನ್ನು ಅರಿವು ಕೆಲಸ ಮಾಡಬೇಕಿದೆ ಎಂದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಮಾತನಾಡಿ ದೇಶದ ಅಭಿವೃದ್ದಿ ಹೊಂದಲು ಸೂಚ್ಯಂಕ ಮುಖ್ಯವಾಗುತ್ತದೆ ಎಂದರು.