ಮಾಜಿ ಸಿಎಂ ಬಸವರಾಜ ಬೊಮ್ಮಾಯಿಗೆ ಅನಾರೋಗ್ಯ, ಆಸ್ಪತ್ರೆಗೆ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ತೀವ್ರ ಮೊಣಕಾಲು ನೋವಿನಿಂದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಬೊಮ್ಮಾಯಿಗೆ ಮೊಣಕಾಲು ಶಸ್ತ್ರಚಿಕಿತ್ಸೆ ನಡೆದಿದ್ದು, ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿನ ಫೋರ್ಟಿಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

ಈ ಕುರಿತು ಟ್ವೀಟ್‌ ಮಾಡಿರುವ ಯಡಿಯೂರಪ್ಪ ಬೊಮ್ಮಾಯಿ ಶೀಘ್ರ ಗುಣಮುಖರಾಗಲೆಂದು ಹಾರೈಸಿದ್ದಾರೆ. ʻ ಶಸ್ತ್ರಚಿಕಿತ್ಸೆಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿರುವ ನಿಕಟಪೂರ್ವ ಮುಖ್ಯಮಂತ್ರಿಗಳು, ಆತ್ಮೀಯರೂ ಆದ ಬಸವರಾಜ ಬೊಮ್ಮಾಯಿ ಅವರು ಆದಷ್ಟು ಶೀಘ್ರದಲ್ಲಿ ಸಂಪೂರ್ಣ ಗುಣಮುಖರಾಗಿ ಚೇತರಿಸಿಕೊಳ್ಳಲಿʼ ಎಂದು ಪೋಸ್ಟ್‌ ಮಾಡಿದ್ದಾರೆ.

ಬೊಮ್ಮಾಯಿಗೆ ಮಂಡಿ ನೋವಿರುವ ಬಗ್ಗೆ ಈ ಹಿಂದೆಯೇ ಸುದ್ದಿಯಾಗಿತ್ತಾದರೂ ರಾಜಕೀಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿದ್ದರು.  ಸದ್ಯ ಶಸ್ತ್ರಚಿಕಿತ್ಸೆಯಿಂದಾಗಿ ಬೊಮ್ಮಾಯಿ ಅವರಿಗೆ ವಿಶ್ರಾಂತಿ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!