ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂಧನದ ಕೊರತೆ ಅನುಭವಿಸುತ್ತಿರುವ ಹಮಾಸ್ ಉಗ್ರರು ಕಳ್ಳತನಕ್ಕೆ ಇಳಿದಿದ್ದಾರೆ. ಗಾಜಾಪಟ್ಟಿಯಲ್ಲಿ ಇಸ್ರೇಲ್ ಸೇನೆಯ ದಾಳಿ ತೀವ್ರವಾಗುತ್ತಿದ್ದಂತೆಯೇ ಇತ್ತ ಹಮಾಸ್ ಉಗ್ರರು ವಿಶ್ವಸಂಸ್ಥೆಯ ನಿರಾಶ್ರಿತರ ರಕ್ಷಣಾ ಶಿಬಿರದ ಮೇಲೆ ದಾಳಿ ಮಾಡಿದ್ದಾರೆ.
ಪ್ಯಾಲೆಸ್ತೀನಿಯರ ರಕ್ಷಣೆಗೆ ತೊಡಗಿದ್ದ ಶಿಬಿರಗಳ ಮೇಲೆ ದಾಳಿ ಮಾಡಿ ಅಪಾರ ಪ್ರಮಾಣದ ಇಂಧನ ಹಾಗೂ ಔಷಧಗಳನ್ನು ಕೊಳ್ಳೆ ಹೊಡೆದಿದ್ದಾರೆ.