I.N.D.I.A ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಖರ್ಗೆ, ರಾಹುಲ್ ಗಾಂಧಿ ಪ್ರಧಾನಿ ಅಭ್ಯರ್ಥಿ: ಶಶಿ ತರೂರ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮುಂದಿನ ಲೋಕಸಭಾ ಚುನಾವಣೆಯಲ್ಲಿ (2024 Lok Sabha polls) ಇಂಡಿಯಾ ಮೈತ್ರಿಕೂಟ (I.N.D.I.A. alliance) ಅಧಿಕಾರಕ್ಕೆ ಬಂದರೆ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅಥವಾ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ (Rahul Gandhi) ಅವರನ್ನು ಪ್ರಧಾನಿಯಾಗಿ ನಾಮನಿರ್ದೇಶನ ಮಾಡಬಹುದು ಎಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯ ಶಶಿ ತರೂರ್ (Shashi Tharoor) ಹೇಳಿದ್ದಾರೆ.

ಮುಂದಿನ ವರ್ಷದ ಚುನಾವಣೆಯಲ್ಲಿ ಅಚ್ಚರಿಯ ಫಲಿತಾಂಶದ ಸಾಧ್ಯತೆವಿದೆ.ಬಿಜೆಪಿ ನೇತೃತ್ವದ ಎನ್‌ಡಿಎಯನ್ನು ಸೋಲಿಸುವ ಮೂಲಕ ಇಂಡಿಯಾ ಮೈತ್ರಿಕೂಟವು ಕೇಂದ್ರದಲ್ಲಿ ಅಧಿಕಾರವನ್ನು ವಶಪಡಿಸಿಕೊಳ್ಳುವ ಅವಕಾಶವಿದೆ ಎಂದಿದ್ದಾರೆ.

ಚುನಾವಣೋತ್ತರ ಸನ್ನಿವೇಶದ ಕುರಿತು ಮಾತನಾಡಿದ ಅವರು, ”ಒಮ್ಮೆ ಫಲಿತಾಂಶ ಬಂದರೆ, ಅದು ಒಂದು ಪಕ್ಷವಲ್ಲದ ಸಮ್ಮಿಶ್ರವಾಗಿರುವ ಕಾರಣ, ಆ ಪಕ್ಷಗಳ ನಾಯಕರು ಒಟ್ಟಾಗಿ ಯಾರನ್ನಾದರೂ ಆರಿಸಬೇಕಾಗುತ್ತದೆ ಎಂದು. ಆದರೆ ನನ್ನ ಊಹೆ ಏನೆಂದರೆ, ಕಾಂಗ್ರೆಸ್ ಪಕ್ಷದಿಂದ ಖರ್ಗೆ ಆಗಿರಬಹುದು, ಆಗ ಅವರು ಭಾರತದ ಮೊದಲ ದಲಿತ ಪ್ರಧಾನಿಯಾಗುತ್ತಾರೆ ಅಥವಾ ರಾಹುಲ್ ಗಾಂಧಿ ಆಗಿರಬಹುದು, ಏಕೆಂದರೆ ಅದು (ಕಾಂಗ್ರೆಸ್) ಅನೇಕ ವಿಧಗಳಲ್ಲಿ ಕುಟುಂಬ ನಡೆಸುವ ಪಕ್ಷವಾಗಿದೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!