ರೈತರ ಪಂಪ್ ಸೆಟ್‌ಗಳಿಗೆ ಸಮರ್ಪಕ ವಿದ್ಯುತ್ ಒದಗಿಸಿ: ಶಾಸಕ ಡಾ. ಶಿವರಾಜ ಪಾಟೀಲ್

ಹೊಸದಿಗಂತ ವರದಿ, ರಾಯಚೂರು :

ಜಿಲ್ಲೆಯಲ್ಲಿ ವಿದ್ಯುತ್ ಉತ್ಪಾದನೆ ಮಾಡುತ್ತಿದ್ದರೂ ಜಿಲ್ಲೆಯ ರೈತರ ಪಂಪ್‌ಸೆಟ್‌ಗಳಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ವಿದ್ಯುತ್ ಪೂರೈಕೆ ಮಾಡದ ಹಿನ್ನಲೆಯಲ್ಲಿ ಬೆಳೆಗಳು ಒಣಗುವ ಮೂಲಕ ರೈತರು ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ ಎಂದು ಶಾಸಕ ಡಾ. ಶಿವರಾಜ ಪಾಟೀಲ ಆರೋಪಿಸಿದರು.
ಮಂಗಳವಾರ ರೈತರ ಪಂಪ್ ಸೆಟ್‌ಗಳಿಗೆ ಸಮರ್ಪಕ ವಿದ್ಯುತ್ ಒದಗಿಸುವಂತೆ ಒತ್ತಾಯಿಸಿ ಜೆಸ್ಕಾಂನ ವಿಭಾಗೀಯ ಕಛೇರಿಗೆ ಬಿಜೆಪಿ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ ಸಂದರ್ಭದಲ್ಲಿ ಮಾತನಾಡಿದರು.
ಸಮರ್ಪಕ ವಿದ್ಯುತ್ ಪೂರೈಕೆ ಇಲ್ಲದಂತಾಗಿ. ಬೆಳೆದುನಿಂತ ಬೆಳೆಗಳು ಒಣಗುತ್ತಿವೆ. ಪ್ರಸಕ್ತ ನೀಡುವಷ್ಟು ವಿದ್ಯುತ್‌ನ್ನು ಪ್ರತಿ ನಿತ್ಯ ನಿರಂತರವಾಗಿ ರೈತರ ಪಂಪ್‌ಸೆಟ್‌ಗಳಿಗೆ ಒದಗಿಸಿದರೆ ಗಂಜಿಗಾಗುವಷ್ಟಾದರೂ ಬೆಳೆಗಳನ್ನು ಪಡೆದುಕೊಳ್ಳಬಹುದು. ಈಗ ವಿದ್ಯುತ್ ಪೂರೈಕೆ ಮಾಡದಿದ್ದರೆ ರೈತರ ಬೆಳೆಗಳು ಸಂಪೂರ್ಣವಾಗಿ ಹಾಳಾಗುತ್ತವೆ ಎಂದರು.
ಚುನಾವಣಾ ಪೂರ್ವದಲ್ಲಿ ರೈತರ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಪೂರೈಕೆಗೆ ಸಂಬAಧಿಸಿದ ಹೇಳಿಕೆಯನ್ನು ಕಾಂಗ್ರೆಸ್ ಮರೆತು ನುಡಿದಂತೆ ನಡೆದುಕೊಳ್ಳುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಗ್ರಾಮೀಣ ಭಾಗದಲ್ಲಿ ಸಮರ್ಪಕ ವಿದ್ಯುತ್ ಸರಬರಾಜು ಇಲ್ಲದ ಕಾರಣಕ್ಕೆ ವಿದ್ಯಾರ್ಥಿಗಳ ಓದಿಗೂ ತೊಂದರೆ ಆಗುತ್ತಿದೆ ಕೂಡಲೆ ನಿರಂತರ ವಿದ್ಯುತ್ ಪೂರೈಕೆಗೆ ಸರ್ಕಾರ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.
ತಮ್ಮ ಪಂಪ್ ಸೆಟ್‌ಗಳಿಗೆ ವಿದ್ಯುತ್ ಸರಬರಾಜು ಇಲ್ಲದಕಾರಣಕ್ಕಾಗಿ ನೀರುಣಿಸುವದಕ್ಕೆ ಸಾಧ್ಯವಾಗದ ಹಿನ್ನಲೆಯಲ್ಲಿ ಒಣಗಿದ ತಮ್ಮ ಬೆಳೆಗಳನ್ನು ಇದೇ ಸಂದರ್ಭದಲ್ಲಿ ರೈತರು ಪ್ರದರ್ಶಿಸಿ ತ್ಮಮ ಆಕ್ರೋಶವನ್ನು ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ವೈ.ಗೋಪಾಲರೆಡ್ಡಿ, ಗಿರೀಶ ಕನಕವೀಡು, ತಿಮ್ಮಪ್ಪ ನಾಡಗೌಡ, ಡಾ.ನಾಗರಾಜ ಭಾಲ್ಕಿ, ನರಸರೆಡ್ಡಿ, ಮುಕ್ತಿಯಾರ, ನಾಗರಾಜ, ರೈತ ಸಂಘದ ಅಧ್ಯಕ್ಷ ಲಕ್ಷ್ಮಣಗೌಡ ಕಡಗಂದೊಡ್ಡಿ, ದೇವರಾಜ್, ನರಸಿಂಗರಾವ್ ಕುಲಕರ್ಣಿ ಇನ್ನಿತರರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!