ಹಮಾಸ್‌ ಉಗ್ರರು ನಾಶವಾಗುವವರೆಗೂ ಯುದ್ಧ ನಿಲ್ಲಿಸುವುದಿಲ್ಲ: ಇಸ್ರೇಲ್‌ ಪ್ರಧಾನಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 
 
ಹಮಾಸ್‌ ಉಗ್ರರು ನಾಶವಾಗುವವರೆಗೂ ಯುದ್ಧ ನಿಲ್ಲಿಸುವುದಿಲ್ಲ ಎಂದು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಪುನರುಚ್ಚರಿಸಿದ್ದಾರೆ.
ಇಂದು ಇಸ್ರೇಲ್‌ ಹಾಗೂ ಪ್ಯಾಲೆಸ್ಟೀನ್‌ ನಡುವಿನ ಸಂಘರ್ಷ ಕುರಿತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಬೆಂಜಮಿನ್‌ ನೆತನ್ಯಾಹು ದೂರವಾಣಿ ಸಂಭಾಷಣೆ ನಡೆಸಿದ್ದಾರೆ.

ಅಕ್ಟೋಬರ್ 7ರಂದು ಹಮಾಸ್‌ನಡೆಸಿದ ದಾಳಿಗೆ ಪ್ರತಿಯಾಗಿ ಇಸ್ರೇಲ್ ನಡೆಸುತ್ತಿರುವ ದಾಳಿ ಕುರಿತು ಉಭಯ ನಾಯಕರು ಚರ್ಚೆ ನಡೆಸಿದ್ದಾರೆ.

ಹಮಾಸ್‌ ಬಂಡುಕೋರರು ಇಸ್ರೇಲ್ ಮೇಲೆ ಕ್ರೂರ ಮತ್ತು ಅಸಹ್ಯಕರ ರೀತಿಯಲ್ಲಿ ದಾಳಿ ನಡೆಸಿದ್ದಾರೆ. ಇದಕ್ಕೆ ಪ್ರತಿಯಾಗಿ ಒಗ್ಗಟ್ಟಿನಿಂದ ನಾವು ಯುದ್ಧ ಸಾರಿದ್ದೇವೆ. ಹಮಾಸ್‌ನ ಮಿಲಿಟರಿ ಮತ್ತು ಆಡಳಿತ ಸಾಮರ್ಥ್ಯಗಳನ್ನು ಸಂಪೂರ್ಣವಾಗಿ ನಾಶಪಡಿಸುವವರೆಗೂ ನಾವು ಯುದ್ಧವನ್ನು ನಿಲ್ಲುವುದಿಲ್ಲ ಎಂದು ನೆತನ್ಯಾಹು ಸ್ಪಷ್ಟಪಡಿಸಿದ್ದಾರೆ’ ಎಂದು ಇಸ್ರೇಲ್ ಪ್ರಧಾನಿ ಕಚೇರಿ ತಿಳಿಸಿದೆ.

ಇಸ್ರೇಲಿ ಪಡೆಗಳು ಹಮಾಸ್ ಅನ್ನು ನಿರ್ಮೂಲನೆ ಮಾಡುವವರೆಗೆ ಯುದ್ಧ ನಿಲ್ಲಿಸುವುದಿಲ್ಲ ಎಂದು ನೆತನ್ಯಾಹು ಅವರು ಪುಟಿನ್‌ಗೆ ವಿವರಿಸಿದ್ದಾರೆ .

ಗಾಜಾ ಪಟ್ಟಿಯಲ್ಲಿ ನಡೆಯುತ್ತಿರುವ ಹಿಂಸಾಚಾರ ಮತ್ತಷ್ಟು ಉಲ್ಬಣಗೊಳಿಸುವುದನ್ನು ತಡೆಯಲು ರಷ್ಯಾ ತೆಗೆದುಕೊಳ್ಳುತ್ತಿರುವ ಕ್ರಮಗಳ ಬಗ್ಗೆ ನೆತನ್ಯಾಹು ಅವರಿಗೆ ಪುಟಿನ್ ಮನವರಿಕೆ ಮಾಡಿಕೊಟ್ಟಿದ್ದಾರೆ ಎಂದು ರಷ್ಯಾದ ವಿದೇಶಾಂಗ ಸಚಿವಾಲಯ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!