ಹೊಸದಿಗಂತ ವರದಿ ಮೈಸೂರು :
ವಿವಿಧ ಕಾರ್ಯಕ್ರಮಗಳ ನಿಮಿತ್ತ ಬುಧವಾರ ಮೈಸೂರಿಗೆ ಭೇಟಿ ನೀಡಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು, ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿ ದೇವಿ ದರುಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಅಧಿಕಾರಿಗಳು ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.