ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಮಾಸ್ ಉಗ್ರರ ವಿರುದ್ಧ ಇಸ್ರೇಲ್ ಸತತ ದಾಳಿ ನಡೆಸುತ್ತಿದೆ. ಇದರ ನಡುವೆ ಇಂದು ಗಾಜಾದ ಆಸ್ಪತ್ರೆ ಮೇಲೆ ಕ್ಷಿಪಣಿ ದಾಳಿ ನಡೆದಿದೆ. ಸುಮಾರು 500ಕ್ಕೂ ಹೆಚ್ಚು ಅಮಾಯಕರು ಬಲಿಯಾಗಿದ್ದಾರೆ ಎಂದು ವರದಿಗಳು ಬಹಿರಂಗಪಡಿಸಿದೆ.
ಇದು ಇಸ್ರೇಲ್ ನಡೆಸಿದ ಕ್ರೂರ ದಾಳಿ ಎಂದುು ಹಮಾಸ್ ಉಗ್ರರು ಹೇಳಿದ್ದಾರೆ. ಈ ಬೆಳವಣಿಗೆ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಆಸ್ಪತ್ರೆ ದಾಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ನಾಗರೀಕರ ಸಾವು ನೋವು ಗಂಬೀರ ವಿಚಾರ. ದಾಳಿಯಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ.
ಗಾಜಾದಲ್ಲಿನ ಅಲ್ ಅಹ್ಲಿ ಆಸ್ಪತ್ರೆ ಮೇಲೆ ನಡೆದ ದಾಳಿಯಿಂದ ಆಘಾತಗೊಂಡಿದ್ದೇನೆ. ಆಸ್ಪತ್ರೆಯಲ್ಲಿ ಅಮಾಯಕರು ಪ್ರಾಣ ಕಳೆದುಕೊಂಡಿದ್ದಾರೆ. ಅಗಲಿದ ಕುಟುಂಬಕ್ಕೆ ನನ್ನ ಸಂತಾಪಗಳು. ಗಾಯಗೊಂಡವರು ಶೀಘ್ರವಾಗಿ ಗಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ಸದ್ಯ ನಡೆಯುತ್ತಿರುವ ಯುದ್ಧದಲ್ಲಿ ನಾಗರೀಕರ ಸಾವು ನೋವು ಗಂಭೀರ ವಿಚಾರ. ಇದು ಆತಂಕ ಹೆಚ್ಚಿಸಿದೆ. ದಾಳಿ ಮಾಡಿದವರನ್ನು ಹೊಣೆಗಾರರನ್ನಾಗಿಸಬೇಕು ಎಂದು ಮೋದಿ ಟ್ವೀಟ್ ಮಾಡಿದ್ದಾರೆ.