ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಕ್ಟೋಬರ್ 19 ರಂದು ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದೆ.
ಗುರುವಾರ ಮಧ್ಯಾಹ್ನ 3:00 ಗಂಟೆಗೆ ಸಚಿವ ಸಂಪುಟದ 2023ನೇ ಸಾಲಿನ 11 ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ.
ಡಿಸೆಂಬರ್ 4 ರಿಂದ 10 ದಿನಗಳ ಕಾಲ ಚಳಿಗಾಲದ ಅಧಿವೇಶನ ನಡೆಯಲಿದೆ ಎಂದು ಹೇಳಲಾಗುತ್ತಿದ್ದು, ಈ ಕುರಿತು ಸಚಿವ ಸಂಪುಟದಲ್ಲಿ ಚರ್ಚೆ ನಡೆಸುವ ಸಾಧ್ಯತೆಗಳಿವೆ ಮೂಲಗಳು ತಿಳಿಸಿವೆ.
ಗ್ಯಾರಂಟಿ ಯೋಜನೆಗಳ ಬಗ್ಗೆ ಸಭೆಯಲ್ಲಿ ಮಹತ್ವದ ಚರ್ಚೆ ನಡೆಯಲಿದ್ದು, ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದ್ದು, ಮಂತ್ರಿಮಂಡಲದ ಸಚಿವರು, ಶಾಸಕರು, ಅಧಿಕಾರಿಗಳು ಹಾಜರಿರಲಿದ್ದಾರೆ.