ರಾಮ ಮಂದಿರ ನಿರ್ಮಾಣಕ್ಕೆ ದೇಣಿ ನೀಡಲು ವಿದೇಶದಲ್ಲಿರುವ ಭಾರತೀಯರಿಗೂ ಸಿಕ್ಕಿತು ಅನುಮತಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಆಯೋಧ್ಯೆ ಶ್ರೀ ರಾಮ ಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದ್ದು, ಈಗಾಗಲೇ ದೇಶದ ವಿವಿಧ ಭಾಗದಿಂದ ಅನೇಕ ರೂಪದಲ್ಲಿ ದೇಣಿಗೆ ಹರಿದುಬರುತ್ತಿದೆ. ಆದ್ರೆ ವಿದೇಶದಲ್ಲಿದ್ದ ಭಾರತೀಯರಿಗೆ ನಿರಾಸೆಯಾಗಿತ್ತು. ಕಾರಣ ವಿದೇಶದಲ್ಲಿನ ಭಾರತೀಯರು ಶ್ರೀ ರಾಮ ಮಂದಿರ ನಿರ್ಮಾಣದಲ್ಲಿ ಅಳಿಲು ಸೇವೆ ನೀಡಲು ಕೇಂದ್ರ ಗೃಹ ಸಚಿವಾಲಯದ ಅನುಮತಿ ಸಿಕ್ಕಿರಲಿಲ್ಲ.

ಆದ್ರೆ ಇದೀಗ ವಿದೇಶದಲ್ಲಿ ನೆಲೆಸಿರುವ ಭಾರತೀಯರು ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಲು ಕೇಂದ್ರ ಗೃಹ ಸಚಿವಾಲಯ ಅನುಮತಿ ನೀಡಿದೆ. ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ವಿದೇಶಿ ಫಂಡ್ ಪಡೆಯಲು ಗ್ರೀನ್ ಸಿಗ್ನಲ್ ನೀಡಲಾಗಿದೆ.

ವಿದೇಶಿ ಕೊಡುಗೆ ನಿಯಂತ್ರಣ ಕಾಯಿದೆ (FCRA )2010ರ ಅಡಿಯಲ್ಲಿ ವಿದೇಶದಿಂದ ಸ್ವಯಂಪ್ರೇರಿತ ದೇಣಿಗೆ ಸ್ವೀಕರಿಸಲು ಅನುಮತಿ ನೀಡಲಾಗಿದೆ. ಕೇಂದ್ರ ಸಚಿವ ಗೃಹ ಸಚಿವಾಲಯ FCRA ಅಡಿಯಲ್ಲಿ ರಾಮಜನ್ಮಭೂಮಿ ತೀರ್ಥ ಟ್ರಸ್ಟ್‌ನ್ನು ನೋಂದಣಿ ಮಾಡಿಕೊಂಡಿದೆ ಎಂದು ಟ್ರಸ್ಟ್ ಹೇಳಿದೆ.

ಇದೇ ವೇಳೆ ಮಹತ್ವದ ಸೂಚನೆಯೊಂದನ್ನು ನೀಡಿದ್ದು, ರಾಮಜನ್ಮಭೂಮಿ ತೀರ್ಥ ಟ್ರಸ್ಟ್‌‌ನ ಅಧಿಕೃತ ಬ್ಯಾಂಕ್ ಖಾತೆಗೆ ಮಾತ್ರ ದೇಣಿಗೆ ಹಣ ನೀಡಬೇಕು. ಇತರ ಯಾವುದೇ ಮೂಲಗಳಿಂದ ದೇಣಿಗೆ ಸ್ವೀಕರಿಸುವುದಿಲ್ಲ ಎಂದು ಟ್ರಸ್ಟ್ ಸ್ಪಷ್ಟಪಡಿಸಿದೆ.

ಎನ್‌ಜಿಒ ಅಥವಾ ಟ್ರಸ್ಟ್ ವಿದೇಶಿ ಫಂಡ್ ಸ್ವೀಕರಿಸಲು FCRA ಬ್ಯಾಂಕ್ ಖಾತೆ ಹೊಂದಿರಬೇಕು. ಈ ಖಾತೆ ದೆಹಲಿಯ ಸಂಸದ್ ಮಾರ್ಗ್‌ನಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ರಾಂಚ್‌ನಲ್ಲಿ ಬ್ಯಾಂಕ್ ಖಾತೆ ಹೊಂದಿರಬೇಕು. ಈ ಖಾತೆಯಿಂದ ಮಾತ್ರ ವಿದೇಶಿ ದೇಣಿಗೆ ಅಥವಾ ಫಂಡ್ ಸ್ವೀಕರಿಸಲು ಸಾಧ್ಯ. ಜೂನ್ ತಿಂಗಳಲ್ಲಿ FCRA ಲೈಸೆನ್ಸ್‌ಗೆ ರಾಮಜನ್ಮಭೂಮಿ ತೀರ್ಥ ಟ್ರಸ್ಟ್ ಅರ್ಜಿ ಸಲ್ಲಿಕೆ ಮಾಡಿತ್ತು.

2020ರಲ್ಲಿ ರಾಮಜನ್ಮಭೂಮಿ ತೀರ್ಥ ಟ್ರಸ್ಟ್ ಭಾರತದಲ್ಲಿ ರಾಮ ಮಂದಿ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಿಸಲು ಆರಂಭಿಸಿತ್ತು. ದೇಶಾದ್ಯಂತ ರಾಮ ಭಕ್ತರು ದೇಣಿಗೆ ನೀಡಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!