ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನ ಅವಧಿಯನ್ನು ನವೆಂಬರ್ 22ರವರೆಗೆ ವಿಸ್ತರಿಸಿ ದೆಹಲಿಯ ನ್ಯಾಯಾಲಯವು ಇಂದು ಆದೇಶ ಹೊರಡಿಸಿದೆ.
ಸಿಸೋಡಿಯಾ ಅವರನ್ನು ಇಂದು ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು,
ಪ್ರಕರಣದ ಎಲ್ಲಾ ಆರೋಪಿಗಳ ವಿರುದ್ಧ ಸಲ್ಲಿಸಲಾದ ಆರೋಪಪಟ್ಟಿಯಲ್ಲಿನ ದಾಖಲೆಗಳನ್ನು ಈಗಾಗಲೇ ಸಲ್ಲಿಸಲಾಗಿದೆ ಎಂದು ಸಿಬಿಐ ನ್ಯಾಯಾಲಯಕ್ಕೆ ತಿಳಿಸಿದೆ.
ಈ ವೇಳೆ ಸಿಬಿಐ ದಾಖಲೆಗಳನ್ನು ಪರಿಶೀಲಿಸುವಂತೆ ಆರೋಪಿಗಳ ಪರ ವಕೀಲರಿಗೆ ನ್ಯಾಯಾಲಯ ಸೂಚನೆ ನೀಡಿದೆ. ಅಲ್ಲದೆ ತನಿಖಾ ಅಧಿಕಾರಿಗೆ ಮನವಿಗಳನ್ನು ಇಮೇಲ್ ಮಾಡಲು ನ್ಯಾಯಾಲಯವು ಹೇಳಿದೆ. ಅದಾಗ್ಯೂ ವಿಚಾರಣೆಯನ್ನು ನವೆಂಬರ್ 22ಕ್ಕೆ ಮುಂದೂಡಿದೆ.