JOB| ಚಿಕ್ಕಬಳ್ಳಾಪುರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 40 ಹುದ್ದೆಗಳ ನೇಮಕಾತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಖಾಲಿ ಇರುವ ಎಂಬಿಬಿಎಸ್‌ ವೈದ್ಯರು ಸೇರಿದಂತೆ ಇತರೆ 40 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಗಳಿಗನುಸಾರ ಎಂಬಿಬಿಎಸ್‌, ಬಿಎಎಂಎಸ್‌, ಎಂ.ಡಿ, ಎಂಪಿಹೆಚ್‌, ಡಿಪಿಹೆಚ್‌, ಎಂ.ಎಸ್ಸಿ ವಿದ್ಯಾರ್ಹತೆ ಜೊತೆಗೆ ಗರಿಷ್ಟ 65 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 13,225/- ರಿಂದ 50,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅಕ್ಟೋಬರ್‌ 21,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!