ಟೀಂ ಇಂಡಿಯಾಗೆ ಬಿಗ್‌ ಶಾಕ್‌: ಇಂಜುರಿಯಿಂದ ಮೈದಾನ ತೊರೆದ ಪಾಂಡ್ಯ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ವಿಶ್ವಕಪ್ ನಲ್ಲಿ ಬಾಂಗ್ಲಾದೇಶ ನಡುವಿನ ಪಂದ್ಯದ ಟೀಮ್ ಇಂಡಿಯಾದ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಸ್ನಾಯು ಸೆಳೆತ ಕಾಣಿಸಿಕೊಂಡ ಹಿನ್ನೆಲೆ ಮೈದಾನ ತೊರೆದಿದ್ದಾರೆ.

ಬೌಲಿಂಗ್ ರನ್‌ಅಪ್ ಮಾಡುವ ವೇಳೆ ಸ್ನಾಯು ಸೆಳೆತ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಹಾರ್ದಿಕ್ ಪಾಂಡ್ಯ, ಮೈದಾನ ತೊರೆದಿದ್ದು, ಟೀಂ ಇಂಡಿಯಾ ಪಾಳಯದಲ್ಲಿ ಆತಂಕ ಮನೆ ಮಾಡಿದೆ.

ಹಾರ್ದಿಕ್ ಪಾಂಡ್ಯ ಅನುಪಸ್ಥಿತಿಯಲ್ಲಿ ವಿರಾಟ್ ಕೊಹ್ಲಿ ಬೌಲಿಂಗ್ ಮಾಡಿ ಗಮನ ಸೆಳೆದಿದ್ದಾರೆ.

ತಂಡದ ಫಿಸಿಯೋ ಮೈದಾನಕ್ಕೆ ಆಗಮಿಸಿ, ನೋವಿನ ಕುರಿತಂತೆ ಪ್ರಥಮ ಚಿಕಿತ್ಸೆ ಮಾಡಿದರೂ, ಸರಿಯಾಗದ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ಹಾರ್ದಿಕ್ ಪಾಂಡ್ಯ ಮೈದಾನ ತೊರೆದರು.

8 ವರ್ಷಗಳ ಬಳಿಕ ಬೌಲಿಂಗ್ ಮಾಡಿದ ವಿರಾಟ್ ಕೊಹ್ಲಿ:
ಓವರ್‌ನ ಅರ್ಧದಲ್ಲೇ ಹಾರ್ದಿಕ್ ಪಾಂಡ್ಯ ಮೈದಾನ ತೊರೆದಿದ್ದರಿಂದ ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಇನ್ನುಳಿದ 3 ಎಸೆತ ಬೌಲಿಂಗ್ ಮಾಡುವ ಮೂಲಕ ಗಮನ ಸೆಳೆದರು. ವಿರಾಟ್ ಕೊಹ್ಲಿ ಬರೋಬ್ಬರಿ 8 ವರ್ಷಗಳ ಬಳಿಕ ಏಕದಿನ ಕ್ರಿಕೆಟ್ ವಿಶ್ವಕಪ್‌ನಲ್ಲಿ ಬೌಲಿಂಗ್ ಮಾಡಿ ಗಮನ ಸೆಳೆದರು. ವಿರಾಟ್ ಕೊಹ್ಲಿ 2015ರ ಏಕದಿನ ವಿಶ್ವಕಪ್ ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ದ ಸಿಡ್ನಿಯಲ್ಲಿ ಕೊನೆಯ ಬಾರಿಗೆ ಬೌಲಿಂಗ್ ಮಾಡಿದ್ದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here