ʻಸಪ್ತ ಸಾಗರದಾಚೆ ಎಲ್ಲೋʼ ಭಾಗ 2 ಬಿಡುಗಡೆ ದಿನಾಂಕ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಕ್ಷಿತ್‌ ಶೆಟ್ಟಿ ಅಭಿನಯದ ʻಸಪ್ತ ಸಾಗರದಾಚೆ ಎಲ್ಲೋʼ ಸಿನಿಮಾದ ಭಾಗ 2 ನವೆಂಬರ್‌ 17ಕ್ಕೆ ರಿಲೀಸ್‌ ಆಗಲಿದೆ.

ಈ ಮುಂಚೆ ಸಿನಿಮಾದ ಎರಡನೇ ಭಾಗವು ಅಕ್ಟೋಬರ್‌ 27ರಂದು ಬಿಡುಗಡೆಯಾಗುವುದಾಗಿ ಹೇಳಲಾಗಿತ್ತು. ಆದರೆ ಕಾರಣಾಂತರಗಳಿಂದ ಸಿನಿಮಾ ರಿಲೀಸ್‌ ದಿನಾಂಕ ಮುಂದೂಡಲಾಗಿದ್ದು, ನ.17ರಂದು ಚಿತ್ರವು ತೆರೆ ಕಾಣಲಿದೆ ಪರಂವಃ ಸಂಸ್ಥೆ ಘೋಷಿಸಿದೆ.

ಈಗಾಗಲೇ ʼಸಪ್ತ ಸಾಗರದಾಚೆ ಎಲ್ಲೋʼ ಸಿನಿಮಾ ಪ್ರೇಕ್ಷಕರ ಮನಗೆದ್ದಿದ್ದು, ಭಾಗ 2ರ ಬಿಡುಗಡೆಗಾಗಿ ಕಾಯುತ್ತಿದ್ದಾರೆ. ಸಿನಿಮಾದಲ್ಲಿ ರಕ್ಷಿತ್ ಶೆಟ್ಟಿ, ರುಕ್ಮಿಣಿ ವಸಂತ್ ಜತೆಗೆ ಅಚ್ಯುತ್ ಕುಮಾರ್, ಅವಿನಾಶ್, ಚೈತ್ರಾ ಆಚಾರ್ ಇನ್ನೂ ಕೆಲವರು ನಟಿಸಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!