ಆಸ್ಟ್ರೇಲಿಯಾ-ಪಾಕ್ ಮ್ಯಾಚ್ ನೋಡಲು ಚಿನ್ನಸ್ವಾಮಿ ಸ್ಟೇಡಿಯಂಗೆ ಬಂದ ಸಿಎಂ ಸಿದ್ದರಾಮಯ್ಯ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (Chinnaswamy Stadium) ನಡೆಯುತ್ತಿರುವ ಆಸ್ಟ್ರೇಲಿಯಾ ಮತ್ತು ಪಾಕಿಸ್ತಾನ ನಡುವಿನ ಮ್ಯಾಚ್‌ ಅನ್ನು ಸಿಎಂ ಸಿದ್ದರಾಮಯ್ಯ ತೆರಳಿ ವೀಕ್ಷಿಸಿದ್ದಾರೆ.

ಸಿಎಂ ಜೊತೆಗೆ ವಿಐಪಿ ವಿಂಗ್‌ನಲ್ಲಿ ಕುಳಿತು ಸಚಿವ ಬೈರತಿ ಸುರೇಶ್, ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು ಮತ್ತು ನಸೀರ್ ಅಹಮದ್ ಕ್ರಿಕೆಟ್‌ ವೀಕ್ಷಣೆ ಮಾಡಿದ್ದಾರೆ.

ಆಸ್ಟ್ರೇಲಿಯಾ ತಂಡವ ಭರ್ಜರಿ ಬ್ಯಾಟಿಂಗ್‌ ಪ್ರದರ್ಶನ ತೋರಿದೆ. 368 ರನ್‌ಗಳ ಬೃಹತ್‌ ಮೊತ್ತದ ಗುರಿ ಬೆನ್ನತ್ತಿರುವ ಪಾಕಿಸ್ತಾನ ತಂಡ ಆರಂಭದಲ್ಲಿ ಉತ್ತಮ ಪ್ರದರ್ಶನ ತೋರಿದರೂ 29.4 ಓವರ್‌ಗಳಲ್ಲಿ 196 ರನ್‌ಗಳಿಗೆ ಪ್ರಮುಖ 3 ವಿಕೆಟ್‌ ಕಳೆದುಕೊಂಡು ಸಂಕಷ್ಟಕ್ಕೀಡಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!