ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರತಿವರ್ಷ ಅಕ್ಟೋಬರ್ 21ರಂದು ಪೊಲೀಸ್ ಹುತಾತ್ಮರ ದಿನವನ್ನು ಆಚರಿಸಲಾಗುತ್ತದೆ. 1959 ರಲ್ಲಿ, ಲಡಾಖ್ ಗಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹತ್ತು ಮಂದಿ ಕೇಂದ್ರ ಸಶಸ್ತ್ರ ಮೀಸಲು ಪಡೆಯ (ಸಿಆರ್‌ಪಿಎಫ್) ಪೊಲೀಸರು ಚೀನಾದ ಸೇನೆಯೊಂದಿಗಿನ ಭೀಕರ ಯುದ್ಧದಲ್ಲಿ ಪ್ರಾಣ ಕಳೆದುಕೊಂಡರು. ಕರ್ತವ್ಯದ ವೇಳೆ ಪ್ರಾಣ ಕಳೆದುಕೊಂಡ ಪೊಲೀಸರ ತ್ಯಾಗವನ್ನು ಸ್ಮರಿಸಿ ಪ್ರತಿವರ್ಷ ಈ ದಿನದಂದು ಶ್ರದ್ಧಾಂಜಲಿ ಸಲ್ಲಿಸಲಾಗುವುದು.
ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸರು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಹೋರಾಡುತ್ತಿದ್ದಾರೆ. ಅಂತಹ ಹುತಾತ್ಮರ ಸ್ಮರಣೆಗಾಗಿ ಪ್ರತಿ ವರ್ಷ ಅಕ್ಟೋಬರ್ 21 ರಂದು ಪೊಲೀಸ್ ಹುತಾತ್ಮರ ಸ್ಮಾರಕ ದಿನವನ್ನು (ಪೊಲೀಸ್ ಧ್ವಜ ದಿನ) ಆಚರಿಸಲಾಗುತ್ತದೆ.
ಇಂದು ದೇಶಾದ್ಯಂತ ಈ ಕಾರ್ಯಕ್ರಮ ನಡೆಯುತ್ತಿದ್ದು, ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಪರಮೇಶ್ವರ್ ಬೆಂಗಳೂರಿನ ಸಿಎಆರ್ ಮೈದಾನದಲ್ಲಿ ಆಯೋಜಿಸಲಾದ ಪೊಲೀಸ್ ಸಂಸ್ಮರಣಾ ದಿನ ಕಾರ್ಯಕ್ರಮದಲ್ಲಿ ಭಾಗಿಯಾಗಿ ಹುತಾತ್ಮ ಪೊಲೀಸರಿಗೆ ಗೌರವ ಸಲ್ಲಿಸಿದರು.
ಅಂತೆಯೇ ದೆಹಲಿಯ ರಾಷ್ಟ್ರೀಯ ಪೊಲೀಸ್ ಸ್ಮಾರಕದಲ್ಲಿ ನಡೆದ ರಾಷ್ಟ್ರೀಯ ಪೊಲೀಸ್ ಸ್ಮಾರಕ ದಿನಾಚರಣೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, ಅಗರ್ತಲಾದಲ್ಲಿ ತ್ರಿಪುರಾ ಸಿಎಂ, ಮುಂಬೈನಲ್ಲಿ ಸಿಎಂ ಏಕನಾಥ್ ಶಿಂಧೆ ಮತ್ತು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ಗುಜರಾತ್ ಪೊಲೀಸ್ ಅಕಾಡೆಮಿಯಲ್ಲಿ ಸಿಎಂ ಭೂಪೇಂದ್ರ ಪಟೇಲ್, ಲಕ್ನೋದಲ್ಲಿ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಪೊಲೀಸ್ ಸ್ಮಾರಕ ದಿನದ ಪರೇಡ್‌ನಲ್ಲಿ ಭಾಗವಹಿಸಿ ಹುತಾತ್ಮ ಪೊಲೀಸರಿಗೆ ಗೌರವ ವಂದನೆ ಸಲ್ಲಿಸಿದರು.