Friday, December 26, 2025

ಪರಿಸರ ಪ್ರಿಯರೇ ಗಮನಿಸಿ, ನ್ಯೂ ಇಯರ್‌ ದಿನದಂದು ಬೆಂಗಳೂರಿನಲ್ಲಿ ಪಾರ್ಕ್‌ಗಳು ಬಂದ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಹೊಸ ವರ್ಷ ಸಂಭ್ರಮಾಚರಣೆ ಹಿನ್ನೆಲೆ ಬೆಂಗಳೂರಿನ ಪಾರ್ಕ್‌ಗಳು ಬಂದ್ ಆಗಲಿವೆ. ಡಿ.31 ರ ಬುಧವಾರ ಸಂಜೆ ಆರು ಗಂಟೆಗೆ ಪಾರ್ಕ್ ಮತ್ತು ಕೆರೆಗಳಿಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಕೇಂದ್ರ ನಗರ ಪಾಲಿಕೆ ಸುತ್ತೋಲೆ ಹೊರಡಿಸಿದೆ.

ಹೊಸ ವರ್ಷದ ಸಂಭ್ರಮಾಚರಣೆಯ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಒಟ್ಟಾಗಿ ಸೇರುವ ಸಾಧ್ಯತೆ ಇದೆ. ಯಾವುದೇ ಅಹಿತಕರ ಘಟನೆಗಳು ಹಾಗೂ ಸಾರ್ವಜನಿಕ ಶಾಂತಿ ಭಂಗವಾಗದಂತಿರಲು ಮುಂಜಾಗ್ರತಾ ಕ್ರಮವಾಗಿ ಬೆಂಗಳೂರು ಕೇಂದ್ರ ನಗರ ಪಾಲಿಕೆಗೆ ಸೇರಿದ ಎಲ್ಲಾ ಉದ್ಯಾನಗಳು ಮತ್ತು ಕೆರೆಗಳಿಗೆ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.

ಇದನ್ನೂ ಓದಿ:

error: Content is protected !!