ರಾಜ್ಯ ಸರ್ಕಾರಿ ನೌಕರರಿಗೆ ದಸರಾ ಗಿಫ್ಟ್: ಸರಕಾರದಿಂದ ತುಟ್ಟಿಭತ್ಯೆ ಹೆಚ್ಚಳ ಆದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇ 3.75 ರಷ್ಟು ಹೆಚ್ಚಿಸಿ ಸರ್ಕಾರ ಆದೇಶ ಹೊರಡಿಸಿದೆ. ಈ ಮೂಲಕ ಶೇಕಡಾ 38.75ಗೆ ಏರಿಕೆಯಾಗಿದೆ.

ಯುಜಿಸಿ/ಎಐಸಿಟಿಇ/ ಐಸಿಎಆರ್‌ (UGC/ AICTE/ ICAR) ವೇತನ ಶ್ರೇಣಿಗಳ ಬೋಧಕ ಸಿಬ್ಬಂದಿ ಹಾಗೂ ಎನ್‌ಜೆಪಿಸಿ (NJPC) ವೇತನ ಶ್ರೇಣಿಯ ನ್ಯಾಯಾಂಗ ಅಧಿಕಾರಿಗಳ ತುಟ್ಟಿಭತ್ಯೆಯನ್ನು ಶೇ. 4 ರಷ್ಟು ಹೆಚ್ಚಿಸಿ (ಶೇ.46 ಕ್ಕೆ ಪರಿಷ್ಕರಿಸಿ) ಸರ್ಕಾರ ಆದೇಶ ಹೊರಡಿಸಿದೆ. ಈ ಮೂಲಕ ಸರ್ಕಾರಿ ನೌಕರರಿಗೆ ಸಂತಸ ಹೆಚ್ಚಾಗಿದೆ.

ತುಟ್ಟಿಭತ್ಯೆಗೆ ಷರತ್ತುಗಳು ಅನ್ವಯ:

  • ಯುಜಿಸಿ/ಎಐಸಿಟಿಇ/ಐಸಿಎಆರ್ ವೇತನ ಶ್ರೇಣಿಗಳ ನಿವೃತ್ತ ವೇತನದಾರರಿಗೂ ಸಹ ಈ ಆದೇಶಗಳು ಅನ್ವಯಿಸುತ್ತವೆ.
  • ಸರ್ಕಾರದ ಮತ್ತು ಜಿಲ್ಲಾ ಪಂಚಾಯತ್‌ಗಳ ಪೂರ್ಣಾವಧಿ ನೌಕರರಿಗೆ, ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ವರ್ಕ್‌ಚಾರ್ಜ್‌
  • ನೌಕರರಿಗೆ ಹಾಗೂ ಸರ್ಕಾರದಿಂದ ಸಹಾಯಾನುದಾನ ಪಡೆಯುತ್ತಿರುವ ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ವಿಶ್ವವಿದ್ಯಾಲಯಗಳಲ್ಲಿ ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ನೌಕರರುಗಳಿಗೆ ಈ ಆದೇಶ ಅನ್ವಯಿಸುತ್ತದೆ.
  • ಯುಜಿಸಿ/ಎಐಸಿಟಿಇ/ಐಸಿಎಆರ್/ಎನ್‌ಜೆಪಿಸಿ, ವೇತನ ಶ್ರೇಣಿಗಳಲ್ಲಿ ಹಾಲಿ ವೇತನ ಪಡೆಯುತ್ತಿರುವ ನೌಕರರಿಗೆ ಮತ್ತು ಎನ್‌ಜೆಪಿಸಿ ‘ಪಿಂಚಣಿದಾರರಿಗೆ ಸಂಬಂಧಿಸಿದಂತೆ ಪ್ರತ್ಯೇಕ ಅದೇಶಗಳನ್ನು ಹೊರಡಿಸಲಾಗುವುದು.ಈ ಆದೇಶದ ಮೇರೆಗೆ ಲಭ್ಯವಿರುವ ತುಟ್ಟಿಭತ್ಯೆಯನ್ನು ನಗದಾಗಿ ಪಾವತಿ ಮಾಡುವುದು.
  • ತುಟ್ಟಿಭತ್ಯೆಯ ಕಾರಣದಿಂದ ಸಂದಾಯ ಮಾಡಬೇಕಾಗಿರುವ ಐವತ್ತು ಪೈಸೆ ಹಾಗೂ ಅದಕ್ಕಿಂತ ಹೆಚ್ಚಿನ ಭಿನ್ನಾಂಕಗಳನ್ನು ಮುಂದಿನ
  • ರೂಪಾಯಿಗೆ ಪೂರ್ಣಗೊಳಿಸತಕ್ಕದ್ದು ಮತ್ತು ಐವತ್ತು ಪೈಸೆಗಿಂತ ಕಡಿಮ ಇರುವ ಭಿನ್ನಾಂಶಗಳನ್ನು ಕಡೆಗಣಿಸತಕ್ಕದ್ದು.
  • ತುಟ್ಟಿಭತ್ಯೆ ಬಾಕಿ ಮೊತ್ತವನ್ನು, 2023ರ ಮೇ ಮಾಹೆಯ ವೇತನ ಬಟವಾಡೆಗೂ ಮೊದಲು ಪಾವತಿ ಮಾಡತಕ್ಕದ್ದಲ್ಲ.
  • ತುಟ್ಟಿಭತ್ಯೆಯನ್ನು ಸಂಭಾವನೆಯ ವಿಶಿಷ್ಟ ಅಂಶವಾಗಿ ತೋರಿಸುವುದು ಮತ್ತು ಯಾವುದೇ ಉದ್ದೇಶಕ್ಕಾಗಿ ಇದನ್ನು ವೇತನ ಎಂದು ಪರಿಗಣಿಸಲಾಗುವುದಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!