ಹೊಸದಿಗಂತ ಡಿಜಿಟಲ್ ಡೆಸ್ಕ್:
ಯಾತ್ರಾರ್ಥಿಗಳಿದ್ದ ಬಸ್ ಪಲ್ಟಿಯಾದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, 15 ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಶನಿವಾರ ರಾತ್ರಿ ನಡೆದಿದೆ.
ಬಸ್ ವಿಂಧ್ಯಾಚಲ ಧಾಮ್‌ಗೆ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ಅದರ ಪರಿಣಾಮ ಇಬ್ಬರು ಮೃತರಾಗಿದ್ದು, 15 ಮಂದಿ ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ.
ಮೃತರನ್ನು ಭೋಲಾ (29) ಮತ್ತು ಕನೋಯಿ (45) ಎಂದು ಗುರುತಿಸಲಾಗಿದೆ. ಕೂಡಲೇ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಜಿಲ್ಲೆಯ ಹಳಿಯ ಪೊಲೀಸ್ ಠಾಣಾ ವ್ಯಾಪ್ತಿಯವರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಲಾಲ್‌ಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತನಿಖೆಯ ಬಳಿಕವಷ್ಟೇ ಅಪಘಾತಕ್ಕೆ ನಿಖರ ಕಾರಣ ತಿಳಿದುಬರಲಿದೆ.