ಹೊಸದಿಗಂತ ಡಿಜಿಟಲ್ ಡೆಸ್ಕ್:
ತೀವ್ರ ಮಂಡಿ ನೋವಿನಿಂದ ಶಸ್ತ್ರಚಿಕಿತ್ಸೆಗೊಳಗಾಗಿ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿಯವರಿಗೆ ಪ್ರಧಾನಿ ನರೇಂದ್ರ ಮೋದಿ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.
ಇಂದು ಬೆಳಗ್ಗೆ ದೂರವಾಣಿ ಕರೆ ಮಾಡಿದ ಪ್ರಧಾನಿ ಮೋದಿ ಆದಷ್ಟು ಬೇಗ ಗುಣಮುಖರಾಗುವಂತೆ ಹಾರೈಸಿದರು.
ಶಸ್ತ್ರಚಿಕಿತ್ಸೆ ಬಳಿಕ ಫೋರ್ಟಿಸ್ ಆಸ್ಪತ್ರೆಯ್ಲೇ ಚಿಕಿತ್ಸೆ ಪಡೆಯುತ್ತಿರುವ ಬೊಮ್ಮಾಯಿ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಾಧ್ಯತೆಯಿದೆ. ಈಗಾಗಲೇ ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಪರಮೇಶ್ವರ್, ಯಡಿಯೂರಪ್ಪ ಸೇರಿದಂತೆ ಹಲವು ರಾಜಕೀಯ ಗಣ್ಯರು ಬೊಮ್ಮಾಯಿ ಆರೋಗ್ಯ ವಿಚಾರಿಸಿದ್ದಾರೆ.