ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಹುಮಹಡಿ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ಮುಂಬೈನ ಕಂದೀವಾಲಿಯಲ್ಲಿ ನಡೆದಿದೆ.
ಮಹಾವೀರ ನಗರದ ಪವನ್ಧಾಮ್ ವೀಣಾ ಸಂತೂರ್ ಕಟ್ಟಡದಲ್ಲಿ ಇಂದು ಮಧ್ಯಾಹ್ನ 12:27ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಘಟನೆಯಲ್ಲಿ ನಾಲ್ವರಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ವಾಹನಗಳು ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.
ಈ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ, ತನಿಖೆಯ ಬಳಿಕವಷ್ಟೇ ಗೊತ್ತಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.