ಹೊಸದಿಗಂತ ಡಿಜಿಟಲ್ ಡೆಸ್ಕ್:
ಐತಿಹಾಸಿಕ ಮೈಸೂರು ಜಂಬೂಸವಾರಿಗೆ ಕ್ಷಣಗಣನೆ ಶುರುವಾಗಿದೆ. ಒಂಬತ್ತು ದಿನಗಳ ದಸರಾ ಉತ್ಸವದ ಕೊನೆ ದಿನವಾದ ಇಂದು ಚಿನ್ನದ ಅಂಬಾರಿಯಲ್ಲಿ ತಾಯಿ ಚಾಮುಂಡೇಶ್ವರಿ ಮೆರವಣಿಗೆಯಲ್ಲಿ ಭಕ್ತರಿಗೆ ದರುಶನ ನೀಡಲಿದ್ದಾಳೆ. ಈ ಹಿನ್ನೆಲೆಯಲ್ಲಿ ಅಮ್ಮನವರ ಉತ್ಸವ ಮೂರ್ತಿ ಚಾಮುಂಡಿ ಬೆಟ್ಟದಿಂದ ಅರಮನೆಯತ್ತ ಬೆಳ್ಳಿ ರಥದಲ್ಲಿ ಮೆರವಣಿಗೆ ಹೊರಟಿದೆ.
ಜಾನಪದ ಕಲಾ ತಂಡಗಳು ಮೆರವಣಿಗೆಯಲ್ಲಿ ಭಾಗಿಯಾಗಿದ್ದು, ಉತ್ಸವ ಮೂರ್ತಿಗೆ ಮೆರವಣಿಗೆಗೆ ಇನ್ನಷ್ಟು ಕಳೆ ಹೆಚ್ಚಿಸಿದೆ. ರಸ್ತೆ ಬದಿಗಳಲ್ಲಿ ನಿಂತ ಭಕ್ತರು ತಾಯಿ ಚಾಮುಂಡಿಗೆ ಜೈಕಾರ ಕೂಗುತ್ತಾ ಹೂಮಳೆ ಹರಿಸುತ್ತಿದ್ದಾರೆ.
ಒಂಬತ್ತು ದಿನಗಳಿಂದ ಚಾಮುಂಡಿ ಬೆಟ್ಟದಲ್ಲಿ ಅಮ್ಮನವರಿಗೆ ವಿಶೇಷ ಅಲಂಕಾರ ಮಾಡಿ, ಪೂಜಾ ಕೈಂಕರ್ಯಗಳು ನಡೆಯುತ್ತಿದ್ದವು. ಇಂದು ಅಂತಿಮವಾಗಿ ಚಿನ್ನದ ಅಂಬಾರಿಯಲ್ಲಿ ನಾಡದೇವತೆಯ ಉತ್ಸವ ಮೂರ್ತಿ ಮೆರವಣಿಗೆ ನಡೆಯಲಿದೆ.