ಪಾಕ್ ವಿರುದ್ಧ ಜಯಭೇರಿ ಬಾರಿಸಿದ ಖುಷಿಯಲ್ಲಿ ಅಫ್ಘನ್ ಆಟಗಾರರ ಮಸ್ತ್‌ ಡ್ಯಾನ್ಸ್ ವೈರಲ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಭಾರತದಲ್ಲಿ ನಡೆಯುತ್ತಿರುವ 2023ರ ಏಕದಿನ ವಿಶ್ವಕಪ್‌ನಲ್ಲಿ ಪಾಕ್‌ ವಿರುದ್ಧ ಗೆದ್ದ ಖುಷಿಯಲ್ಲಿ ಅಫ್ಘಾನಿಸ್ತಾನ ತಂಡದ ಆಟಗಾರರ ಡ್ಯಾನ್ಸ್‌ ಸಖತ್‌ ವೈರಲ್‌ ಆಗುತ್ತಿದೆ.

ಈಗಾಗಲೇ ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡದ ವಿರುದ್ಧ ಗೆಲುವು ದಾಖಲಿಸಿರುವ ತಂಡ, ಸೋಮವಾರ ಚೆನ್ನೈ ಕ್ರೀಡಾಂಗಣದಲ್ಲಿ ನಡೆದ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಪಂದ್ಯದಲ್ಲಿ ಎಂಟು ವಿಕೆಟ್ ಗಳಿಂದ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಪಾಕಿಸ್ತಾನ ತಂಡ ನಿಗದಿತ 50 ಓವರ್‌ಗಳಲ್ಲಿ ಏಳು ವಿಕೆಟ್‌ ಕಳೆದುಕೊಂಡು 282 ರನ್‌ ಗಳಿಸಿತು. ಆ ಬಳಿಕ ಗುರಿ ಮುರಿಯಲು ಕಣಕ್ಕೆ ಇಳಿದ ಅಫ್ಘಾನ್ ಬ್ಯಾಟ್ಸ್ ಮನ್ ಗಳು ಅದ್ಭುತ ಪ್ರತಿಭೆ ತೋರಿ 49 ಓವರ್‌ಗಳಲ್ಲಿ ಕೇವಲ ಎರಡು ವಿಕೆಟ್ ನಷ್ಟಕ್ಕೆ 286 ರನ್ ಗಳಿಸಿ ಗೆಲುವು ಸಾಧಿಸಿತು.

ಮೈದಾನದಿಂದ ಹೊಟೇಲ್‌ಗೆ ಹೋಗುವಾಗ ಅಫ್ಘಾನಿಸ್ತಾನದ ಆಟಗಾರರು ಬಸ್‌ನಲ್ಲಿ ಕುಣಿದು ಕುಪ್ಪಳಿಸಿದರು. ಬಾಲಿವುಡ್ ನಟ ಶಾರುಖ್ ಖಾನ್ ಅಭಿನಯದ ‘ಚೆನ್ನೈ ಎಕ್ಸ್ ಪ್ರೆಸ್’ ಸಿನಿಮಾದ ‘ಲುಂಗಿ ಡ್ಯಾನ್ಸ್’ ಹಾಡಿಗೆ ಆಫ್ಘನ್ ಆಟಗಾರರು ಡ್ಯಾನ್ಸ್ ಮಾಡಿ ಸಂಭ್ರಮಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!