ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಸ್ರೇಲ್ ಹಾಗೂ ಪ್ಯಾಲೆಸ್ತೀನ್ ನಡುವಿನ ಯುದ್ಧ ಭೀಕರ ಹಂತಕ್ಕೆ ತಲುಪಿದೆ, ಯುದ್ಧ 19ನೇ ದಿನಕ್ಕೆ ಕಾಲಿಟ್ಟಿದ್ದು, ಇಸ್ರೇಲ್ ಗಾಜಾ ಗಡಿಯ ಭಾಗದ ಮೇಲೆ ವೈಮಾನಿಕ ದಾಳಿ ತೀವ್ರಗೊಳಿಸಿದೆ.
ಭೂ ಆಕ್ರಮಣಕ್ಕೆ ಮುಂದಾಗಿರುವ ಇಸ್ರೇಲ್ ಹಮಾಸ್ ಉಗ್ರರನ್ನು ಹೆಡೆಮುರಿ ಕಟ್ಟುವ ಪಣ ತೊಟ್ಟಿದೆ. ಆದರೆ ಇಸ್ರೇಲ್ ದಾಳಿಯಿಂದಾಗಿ 700 ಪ್ಯಾಲೆಸ್ತೀನಿಯ ಮೃತಪಟ್ಟಿದ್ದಾರೆ. ಗಾಯಗೊಂಡವರಿಗೆ ಯಾವುದೇ ವೈದ್ಯಕೀಯ ಸೌಲಭ್ಯ ಇಲ್ಲದಂತಾಗಿದ್ದು, ಮೃತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ.
ಯುದ್ಧದಿಂದ ನಾಗರಿಕರು ಎದುರಿಸುತ್ತಿರುವ ಸಂಕಷ್ಟದ ಬಗ್ಗೆ ಅಮೆರಿಕ ಕಳವಳ ವ್ಯಕ್ತಪಡಿಸಿದೆ. ಗಾಜಾದ ಮೇಲೆ ಇಸ್ರೇಲ್ ನಿರಂತರ ದಾಳಿ ನಡೆಸುತ್ತಲಿದ್ದು, ಮೃತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ ವ್ಯಾಪಕ ಸಂಘರ್ಷ ಉಂಟಾಗುವ ಸಾಧ್ಯತೆ ಇದೆ ಎಂದು ಅಮೆರಿಕ ಕಳವಳ ವ್ಯಕ್ತಪಡಿಸಿದೆ.