ನಾಳೆ ಐಐಎಂಬಿ ಸುವರ್ಣ ಮಹೋತ್ಸವಕ್ಕೆ ಚಾಲನೆ ನೀಡಲಿದ್ದಾರೆ ರಾಷ್ಟ್ರಪತಿ ದ್ರೌಪದಿ ಮುರ್ಮು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌  

ಅಕ್ಟೋಬರ್ 26 ರಂದು ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೆಜ್‌ಮೆಂಟ್‌, ಬೆಂಗಳೂರು ಇದರ ಸುವರ್ಣ ಮಹೋತ್ಸವ ಸಪ್ತಾಹವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉದ್ಘಾಟಿಸಲಿದ್ದಾರೆ.

ಸುವರ್ಣ ಮಹೋತ್ಸವದ ಅಂಗವಾಗಿ ಐಐಎಂ ಬೆಂಗಳೂರು ಸರಣಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದು, ಮೊದಲ ದಿನ ರಾಷ್ಟ್ರಪತಿ ಮುರ್ಮು ಅವರು ಕಾರ್ಯಕ್ರಮ ಉದ್ಘಾಟಿಸಿ ಭಾಷಣ ಮಾಡಲಿದ್ದಾರೆ. ನಂತರ “ಮೇಕಿಂಗ್ ಆಫ್ ಐಐಎಂಬಿ”, ಪುಸ್ತಕ ಬಿಡುಗಡೆ ಹಾಗೂ ಸಂಸ್ಥೆಯ 50 ವರ್ಷಗಳ ಪಯಣವನ್ನು ಅನವಾರಣಗೊಳಿಸುವ ಚಲನಚಿತ್ರ ಪ್ರದರ್ಶನ ನಡೆಯಲಿದೆ.

ಕಾರ್ಯಕ್ರಮದಲ್ಲಿ ಮಾನ್ಯ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ , ಐಐಎಂ ಬೆಂಗಳೂರು ಆಡಳಿತ ಮಂಡಳಿಯ ಅಧ್ಯಕ್ಷರಾದ ಡಾ. ದೇವಿ ಪ್ರಸಾದ್ ಶೆಟ್ಟಿ ಮತ್ತು ಐಐಎಂ ಬೆಂಗಳೂರು ನಿರ್ದೇಶಕ ಪ್ರೊ ರಿಷಿಕೇಶ ಟಿ ಕೃಷ್ಣನ್ ಅವರು ಭಾಗಿಯಾಗಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!