ಹೊಸದಿಗಂತ ಡಿಜಿಟಲ್ ಡೆಸ್ಕ್:
ಗುಜರಾತ್ನ ಕಛ್ ಪ್ರದೇಶದ ಭುಜ್ನಲ್ಲಿ ನ.5ರಿಂದ 7 ರವರೆಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತೀಯ ಕಾರ್ಯಕಾರಿ ಮಂಡಲ ಬೈಠಕ್ ನಡೆಯಲಿದೆ.
ಈ ಸಭೆಯಲ್ಲಿ ಎಲ್ಲಾ 45 ಪ್ರಾಂತ್ಯಗಳಲ್ಲಿ ಕಾರ್ಯನಿರ್ವಹಿಸುವ ಸಂಘಚಾಲಕರು, ಕಾರ್ಯವಾಹಗಳು, ಪ್ರಾಂತ ಪ್ರಚಾರಕರು ಮತ್ತು ಅವರ ಸಹ ಸಂಘಚಾಲಕರು, ಸಹ-ಕಾರ್ಯಗಳು ಮತ್ತು ಸಹ-ಪ್ರಾಂತ ಪ್ರಚಾರಕರು ಭಾಗವಹಿಸಲಿದ್ದಾರೆ.
ಸರಸಂಘಚಾಲಕ ಡಾ. ಮೋಹನ್ ಭಾಗವತ್, ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಹಾಗೂ ಕಾರ್ಯಕಾರಿ ಮಂಡಳಿಯ ಎಲ್ಲ ಸದಸ್ಯರು ಸಭೆಯಲ್ಲಿ ಭಾಗಿಯಾಗಲಿದ್ದಾರೆ.
ಸಭೆಯಲ್ಲಿ ಸಂಘದ ಸಾಂಸ್ಥಿಕ ಕಾರ್ಯವನ್ನು ಪರಿಶೀಲನೆ ಮಾಡುವುದರ ಜೊತೆಗೆ ಕಳೆದ ತಿಂಗಳು ಪುಣೆಯಲ್ಲಿ ನಡೆದ ಅಖಿಲ ಭಾರತ ಸಮನ್ವಯ ಸಭೆಯಲ್ಲಿ ಪ್ರಸ್ತಾಪಿಸಲಾದ ವಿಷಯಗಳ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಲಾಗುವುದು. ಇದರ ಜೊತೆ ಜನವರಿಯಲ್ಲಿ ಅಯೋಧ್ಯೆಯ ರಾಮಮಂದಿರ ಉದ್ಘಾಟನಾ ಸಮಾರಂಭ, ಆ ಸಂದರ್ಭದಲ್ಲಿ ದೇಶಾದ್ಯಂತ ಯಾವೆಲ್ಲಾ ಕಾರ್ಯಕ್ರಮಗಳನ್ನು ಆಯೋಜಿಸಬಹುದು ಎನ್ನುವ ಬಗ್ಗೆಯೂ ಮಾತುಕತೆ ನಡೆಯಲಿದೆ.