ಬಿಗ್ ಬಾಸ್ ಮಾಜಿ ಸ್ಪರ್ಧಿ ಆರ್ಯವರ್ಧನ್ ಗುರೂಜಿಗೂ ಸಂಕಷ್ಟ ತಂದ ಹುಲಿ ಉಗುರು ಪೆಂಡೆಂಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಿಗ್ ಬಾಸ್ (Big Boss) ಮಾಜಿ ಸ್ಪರ್ಧಿ ಆರ್ಯವರ್ಧನ್ ಗುರೂಜಿ (Aryavardhan Guruji) ಗೂ ಹುಲಿ ಉಗುರು ಸಂಕಷ್ಟ ತಂದಿದ್ದು, ಕೊರಳಲ್ಲೂ ಹುಲಿ ಉಗುರು (Tiger claw) ಪೆಂಡೆಂಟ್ ಧರಿಸಿದ್ದರು ಎನ್ನುವ ಕಾರಣಕ್ಕಾಗಿ ಅವರ ಕಚೇರಿ ಮೇಲೆ ಅರಣ್ಯಾಧಿಕಾರಿಗಳು ದಾಳಿ ಮಾಡಿದ್ದಾರೆ.

ವಿಚಾರಣೆಗೆ ನೋಟಿಸ್ ನೀಡಿದ್ದು, ಹುಲಿ ಉಗುರನ್ನು ವಶ ಪಡಿಸಿಕೊಳ್ಳಲಾಗಿದೆ.

ಆರ್ಯವರ್ಧನ್ ಕೂಡ ಬಿಗ್ ಬಾಸ್ ಸ್ಪರ್ಧಿಯಾಗಿದ್ದರು. ಆ ಸಮಯದಲ್ಲೇ ಅವರು ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದರು. ಈಗ ಅದನ್ನು ಪತ್ತೆ ಹಚ್ಚಲಾಗಿದೆ. ಆರ್ಯವರ್ಧನ್ ಕಚೇರಿಗೆ ಆಗಮಿಸಿರುವ ಅರಣ್ಯಾಧಿಕಾರಿಗಳು, ನೋಟಿಸ್ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಆರ್ಯವರ್ಧನ್ ಕುತ್ತಿಗೆಯಲ್ಲಿ ವ್ಯಾಘ್ರನಖ ಹಾಕಿಕೊಂಡಿದ್ದರು ಎಂದು ಹೇಳಲಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!